ಕ್ರಿಶ್ಚಿಯನ್ ಸಮುದಾಯದ ಅಭಿವೃದ್ದಿಗಾಗಿ ನೀಡುವ ಸೌಲಭ್ಯಗಳ ಅರಿವು ಮೂಡಿಸಲು ರಾಜ್ಯಾದ್ಯಂತ ಸಂಚಾರ: ಕೆನಡಿ ಶಾಂತಕುಮಾರ್
ಉಡುಪಿ: ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಮೂಲಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಪಡೆಯುವಂತೆ ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ.ಕೆನಡಿ ಶಾಂತಕುಮಾರ್ ಹೇಳಿದರು. ಅವರು ಶನಿವಾರ ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಕ್ರಿಶ್ಚಿಯನ್ ಸಮುದಾಯದವರಿಗೆ ಇಲಾಖೆ ವತಿಯಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಹಾಗೂ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ವತಿಯಿಂದ ರಾಜ್ಯಾದ್ಯಂತ ಚರ್ಚ್ ಗಳ […]