ಅಡಿಕೆ ಬೆಳಗಾರರ ಸಭೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಬೆಂಗಳೂರು: ಕರ್ನಾಟಕ ರಾಜ್ಯ ಅಡಿಕೆ ಸಹಕಾರಿ ಸಂಘಗಳ ಸಹಕಾರ ಮಹಾಮಂಡಳಿ ಶಿವಮೊಗ್ಗ ಇದರ ನೇತೃತ್ವದಲ್ಲಿ ಜು. 20 ರಂದು ಶಾಸಕರ ಭವನದಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆ, ಅಡಿಕೆ ಬೆಳೆಗೆ ಬರುವ ರೋಗಗಳ ಬಗ್ಗೆ ಮತ್ತು ಅಡಿಕೆ ಬೆಳೆಯ ಬಗ್ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಇರುವ ಪ್ರಕರಣಗಳ ಬಗ್ಗೆ ಚರ್ಚಿಸಲಾಯಿತು.