ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲದಿಂದ ವಿವಿಧ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನಲ್ಲಿ ಸ್ನಾತಕ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್.ಸ್ಸಿ, ಬಿ.ಎಸ್.ಸಿ, ಬಿ.ಸಿ.ಎ ಹಾಗೂ ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್.ಐ.ಎಸ್.ಸ್ಸಿ, ಎಂ.ಎಸ್ಸಿ ಪದವಿ, ಡಿಪ್ಲೋಮಾ, ಪಿಜಿ ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್  www.ksoumysuru.ac.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಪ್ರಾದೇಶಿಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ. ಕಲಿಕಾರ್ಥಿ ಸಹಾಯ […]

ಕ.ರಾ.ಮು.ವಿ ಕಲಿಕಾರ್ಥಿ ಸಹಾಯ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಉಡುಪಿ ಪ್ರಾದೇಶಿಕ ಕೇಂದ್ರ ವ್ಯಾಪ್ತಿಯ ನಗರ ಮತ್ತು ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕ.ರಾ.ಮು.ವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ತೆರೆಯಲು ವೆಬ್‌ಸೈಟ್ www.ksoumysuru.ac.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರ, ಬನ್ನಂಜೆ, ಉಡುಪಿ ದೂ.ಸಂಖ್ಯೆ: 0820- 2522247, 9972526647 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.