ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ ಬಳಿಕವೇ ಕಾಲೇಜು ಶುರು
ಚಿಕ್ಕಬಳ್ಳಾಪುರ: 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ನಂತರ ಕಾಲೇಜು ಆರಂಭಿಸುವ ಕುರಿತು ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಲೇಜು ಆರಂಭದ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಈ ಬಗ್ಗೆ ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು. ಕಾಲೇಜು ವಿದ್ಯಾರ್ಥಿಗಳೆಲ್ಲರಿಗೂ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸಬಹುದು ಎಂದು ತಾಂತ್ರಿಕ ಸಲಹಾ […]