Tag: #karnataka
-
‘ಕಾವೇರಿ’ದ ನೀರು ಬಿಡುಗಡೆ ಕಾದಾಟ: ವಿಶೇಷ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಕರ್ನಾಟಕಕ್ಕೆ ಮಂಗಳವಾರ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 13 ರಂದು “ವಿಶೇಷ ತುರ್ತು ಸಭೆ”ಗೆ ಕರೆ ನೀಡಿದ್ದಾರೆ. ತುರ್ತು ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶದ ಸಚಿವರು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು…
-
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಸುಲ್ಕೋಡ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ ಗಡಿ ಭಾಗದ ಗ್ರಾಮಸ್ಥರು
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ನೂರಾರು ಗ್ರಾಮಸ್ಥರು ಮಹಾರಾಷ್ಟ್ರದ ಗಡಿ ಪ್ರದೇಶದಲ್ಲಿ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳುವ ಪ್ರಸ್ತಾಪವನ್ನು ವಿರೋಧಿಸಿದರು. ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಸಾಂಗ್ಲಿ, ಮೀರಜ್ ಮತ್ತು ಇಚಲಕರಂಜಿ ಜಿಲ್ಲೆಯ ಹಳ್ಳಿಗಳು ಮತ್ತು ಪಟ್ಟಣಗಳ ನಿವಾಸಿಗಳು ಮೂಲಭೂತ ಸೌಕರ್ಯಗಳನ್ನು ಪಡೆಯುವ ವಿಷಯದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಗ್ರಾಮಗಳನ್ನು ಕರ್ನಾಟಕಕ್ಕೆ ವಿಲೀನಗೊಳಿಸಬೇಕೆಂದು ಒತ್ತಾಯಿಸಿದರು. ಅಸಮಾಧಾನದ ನಡುವೆ, ಮಹಾರಾಷ್ಟ್ರ ಸರ್ಕಾರವು ಸುಲ್ಕುಡ್ ಗ್ರಾಮದಲ್ಲಿ ದೂಧ ಗಂಗಾ ನದಿಗೆ ಬ್ಯಾರೇಜ್ ನಿರ್ಮಿಸುವ ಮೂಲಕ ಇಚಲಕರಂಜಿ ಜಿಲ್ಲೆಗೆ ನೀರು ಹರಿಸಲು…
-
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ: ಯಾವ ನಗರದಲ್ಲಿ ಎಷ್ಟು ಹೆಚ್ಚಳ ತಿಳಿದುಕೊಳ್ಳಿ
ಬೆಂಗಳೂರು: ರಾಜ್ಯದ ಜನತೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಉಚಿತ ವಿದ್ಯುತ್ ನಿಂದ ಆಗುವ ನಷ್ಟವನ್ನು ಸರಿದೂಗಿಸುವ ಸಲುವಾಗಿ ವಿದ್ಯುತ್ ದರವನ್ನು ಹೆಚ್ಚಿಸಿದೆ ಎನ್ನಲಾಗಿದ್ದು, ಇದರ ವಿರುದ್ದ ವಿರೋಧ ಪಕ್ಷ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ನಾಗರಿಕರು ತಮ್ಮ ವಿದ್ಯುತ್ ಬಿಲ್‌ಗಳನ್ನು ಪಾವತಿಸುವಾಗ 200 ಯೂನಿಟ್‌ಗಳಿಗಿಂತ ಹೆಚ್ಚಿನ ಸ್ಲ್ಯಾಬ್ ಹೊಂದಿದವರಾಗಿದ್ದರೆ ಈ ತಿಂಗಳು ಪ್ರತಿ ಯೂನಿಟ್‌ಗೆ 2.89 ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚದ ಹೊಂದಾಣಿಕೆ ಮತ್ತು…
-
24 ಶಾಸಕರಿಗೆ ಸಚಿವಗಿರಿ: ಶನಿವಾರದಂದು ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇನ್ನೂ 24 ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಪಕ್ಷದ ಕೇಂದ್ರ ನಾಯಕರ ನಡುವೆ ನಡೆದ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೇ 20 ರಂದು ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರ ಜೊತೆ ಇನ್ನೂ ಎಂಟು ಮಂದಿ ಪ್ರಮಾಣ…
-
ಕರ್ನಾಟಕದಲ್ಲಿ ಪೂರ್ಣ ಬಹುಮತದ ಬಿಜೆಪಿ ಸರಕಾರ ರಚನೆ: ಅಮಿತ್ ಶಾ
ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಕಳೆದ 2 ತಿಂಗಳಲ್ಲಿ ನಾನು ರಾಜ್ಯಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ ಮತ್ತು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ನೋಡಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿಗೆ ಭಾರಿ ಜನಾದೇಶ ಸಿಗಲಿದೆ.ಮಂಡ್ಯದ ಜನತೆ ಕೂಡ ಈಗ ವಂಶ ಪಾರಂಪರ್ಯ ಪಕ್ಷಗಳನ್ನು ಬಿಟ್ಟು ಬಿಜೆಪಿಯ ಅಭಿವೃದ್ಧಿ ರಾಜಕಾರಣವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕಕ್ಕೆ ಶುಭ ಸೂಚನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮುಂಬರುವ ರಾಜ್ಯಗಳ…