24 ಶಾಸಕರಿಗೆ ಸಚಿವಗಿರಿ: ಶನಿವಾರದಂದು ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇನ್ನೂ 24 ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಪಕ್ಷದ ಕೇಂದ್ರ ನಾಯಕರ ನಡುವೆ ನಡೆದ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೇ 20 ರಂದು ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರ ಜೊತೆ ಇನ್ನೂ ಎಂಟು ಮಂದಿ ಪ್ರಮಾಣ […]
ಕರ್ನಾಟಕದಲ್ಲಿ ಪೂರ್ಣ ಬಹುಮತದ ಬಿಜೆಪಿ ಸರಕಾರ ರಚನೆ: ಅಮಿತ್ ಶಾ

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಕಳೆದ 2 ತಿಂಗಳಲ್ಲಿ ನಾನು ರಾಜ್ಯಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ ಮತ್ತು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ನೋಡಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿಗೆ ಭಾರಿ ಜನಾದೇಶ ಸಿಗಲಿದೆ.ಮಂಡ್ಯದ ಜನತೆ ಕೂಡ ಈಗ ವಂಶ ಪಾರಂಪರ್ಯ ಪಕ್ಷಗಳನ್ನು ಬಿಟ್ಟು ಬಿಜೆಪಿಯ ಅಭಿವೃದ್ಧಿ ರಾಜಕಾರಣವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕಕ್ಕೆ ಶುಭ ಸೂಚನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮುಂಬರುವ ರಾಜ್ಯಗಳ […]
ಕರ್ನಾಟಕ ಚುನಾವಣೆ: ಬಿಜೆಪಿಗೆ ಪ್ರಧಾನ್-ಅಣ್ಣಾಮಲೈ ಸಾರಥ್ಯ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಶನಿವಾರ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಿದೆ. ಪಕ್ಷ ಸಂಘಟನೆಯಲ್ಲಿ ಅನುಭವವಿರುವ ಪ್ರಧಾನ್, ಈ ಹಿಂದೆಯೂ ಹಲವು ಚುನಾವಣೆಗಳನ್ನು ನಿಭಾಯಿಸುವ ಜವಾಬ್ದಾರಿಯನ್ನು ಹೊತ್ತಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಕರ್ನಾಟಕಕ್ಕೆ ಅಣ್ಣಾಮಲೈ ಹೊಸಬರೇನಲ್ಲ. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಸಿಂಘಂ ಎಂದು ಖ್ಯಾತಿವೆತ್ತಿದ್ದ ಅಣ್ಣಾಮಲೈ ಇಲ್ಲಿನವರಿಗೆ ಚಿರಪರಿಚಿತ ಹೆಸರು. ಕರ್ನಾಟಕದಲ್ಲಿ ಈ ವರ್ಷದ ಮಧ್ಯಭಾಗದಲ್ಲಿ ಚುನಾವಣೆ […]
ಸಂಸದರ ನಿಧಿ ಬಳಕೆಯಲ್ಲಿ ಕರ್ನಾಟಕಕ್ಕೆ 16ನೇ ಸ್ಥಾನ

ನವದೆಹಲಿ: ಬಿಜೆಪಿಯ 25 ಸೇರಿದಂತೆ 28 ಸಂಸದರನ್ನು ಹೊಂದಿರುವ ಕರ್ನಾಟಕವು, ಸಂಸದ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಲೋಕಸಭಾ ಸದಸ್ಯರಿಗೆ ಮೀಸಲಿಟ್ಟ 140 ಕೋಟಿ ರೂ.ಗಳಲ್ಲಿ 20 ಕೋಟಿ (ಶೇ. 14) ಮಾತ್ರ ಬಳಸಿಕೊಂಡಿದೆ. ನಿಧಿ ಬಳಕೆಯಲ್ಲಿ ರಾಜ್ಯ 16ನೇ ಸ್ಥಾನದಲ್ಲಿದೆ. ಕೇಂದ್ರ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ಬುಧವಾರ ಕೇಂದ್ರ ಬಜೆಟ್ ಮಂಡನೆಗೆ ಮುನ್ನ 2022-2023ರಲ್ಲಿ ನಿಧಿಯ ಬಳಕೆಯ ಹೇಳಿಕೆಗಳನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ, ಕರ್ನಾಟಕದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಇಬ್ಬರೂ ಒಟ್ಟಾಗಿ […]
ಗುಜರಾತ್ ಚುನಾವಣಾ ಫಲಿತಾಂಶ ರಾಜ್ಯ ಚುನಾವಣೆಯ ದಿಕ್ಸೂಚಿ: ನಯನಾ ಗಣೇಶ್, ವೀಣಾ ಶೆಟ್ಟಿ

ಉಡುಪಿ: ಗುಜರಾತ್ ಬಿಜೆಪಿ ಜಯಭೇರಿ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿದ್ದಾರೆ. ಗುಜರಾತ್ ನಲ್ಲಿ 7ನೇ ಬಾರಿ ಅತೀ ಹೆಚ್ಚು ಸ್ಥಾನ ಗಳಿಸುವ ಮೂಲಕ ದಾಖಲೆ ನಿರ್ಮಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಯಶಸ್ವಿ ಆಡಳಿತ, ಅಭಿವೃದ್ಧಿ ಪರ ಚಿಂತನೆಗೆ ಮತದಾರರ ಒಲವು ವ್ಯಕ್ತವಾಗಿದೆ. ಗುಜರಾತ್ ರಾಷ್ಟ್ರಕ್ಕೆ ಒಂದು ಮಾದರಿ ರಾಜ್ಯವಾಗಿ ರೂಪುಗೊಂಡಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಯಕತ್ವದಿಂದ ಗೆಲುವು ಸಾಧಿಸಿದ್ದು ಈ ಫಲಿತಾಂಶ ಮುಂದಿನ ರಾಜ್ಯ […]