ಕೇರಳಕ್ಕೆ ಮುಂಚಿತವಾಗಿ ಆಗಮಿಸಿದ ಮಾನ್ಸೂನ್: ಜೂನ್ 2 ರೊಳಗೆ ಕರ್ನಾಟಕಕ್ಕೆ ಮುಂಗಾರು ಮಳೆಯ ಸಿಂಚನ

ಬೆಂಗಳೂರು: ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮೂರು ದಿನಗಳ ಮುಂಚಿತವಾಗಿ ಭಾನುವಾರವೆ ಕೇರಳಕ್ಕೆ ಆಗಮಿಸಿದ್ದು, ಜೂನ್ 2 ರ ವೇಳೆಗೆ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ. ಇದು ನಾಲ್ಕು ತಿಂಗಳ ಅವಧಿಯ ಸಾಮಾನ್ಯ ಮಳೆಗಾಲದ ಮುನ್ಸೂಚನೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕೇರಳ, ತಮಿಳುನಾಡು, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಭಾರೀ ಮಳೆ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಬೆಳಿಗ್ಗೆ 8.30 ಕ್ಕೆ ದಾಖಲಿಸಿದ ಮಾಹಿತಿಯು ತೋರಿಸಿದೆ. ಕೇರಳದ 14 ಹವಾಮಾನ ಕೇಂದ್ರಗಳಲ್ಲಿ […]
ಪೋಷಕರೆ ಖಾಸಗಿ ಪದವಿಪೂರ್ವ ಕಾಲೇಜುಗಳ ಮಾನ್ಯತೆ ಖಚಿತಪಡಿಕೊಳ್ಳಿ: ಪದವಿ ಪೂರ್ವ ಶಿಕ್ಷಣ ಇಲಾಖೆ

ಉಡುಪಿ: ರಾಜ್ಯದ ಉಚ್ಛ ನ್ಯಾಯಾಲಯದ ಆದೇಶದಂತೆ, ಜಿಲ್ಲೆಯಲ್ಲಿರುವ ಖಾಸಗಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಿಸಿದಂತೆ, ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಖಚಿತಪಡಿಸಿಕೊಂಡ ನಂತರವೇ ಪದವಿಪೂರ್ವ ತರಗತಿಗಳಿಗೆ ದಾಖಲಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದೆಲ್ಲೆಡೆ ಶಾಲೆಗಳ ಪುನರಾರಂಭ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಖಾದ್ಯದ ಸ್ವಾಗತ

ಬೆಂಗಳೂರು: ರಾಜ್ಯದೆಲ್ಲೆಡೆ ಶಾಲೆಗಳ ಪುನರಾರಂಭದ ದಿನದಂದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಿಹಿ ಖಾದ್ಯ ನೀಡಿ ಸ್ವಾಗತಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದ್ದು, ಶಾಲೆಯ ಮೊದಲ ದಿನದ ಮಧ್ಯಾಹ್ನದ ಊಟದ ಜೊತೆಗೆ ಕನಿಷ್ಠ ಒಂದು ಸಿಹಿ ಖಾದ್ಯವನ್ನು ತಯಾರಿಸುವಂತೆ ಶಾಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸುತ್ತೋಲೆಯ ಪ್ರಕಾರ, ಕ್ಷೀರ ಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟ ಯೋಜನೆಗಳು ಶಾಲಾ ಪುನರಾರಂಭದ ಮೊದಲ ದಿನದಿಂದಲೆ ಕಾರ್ಯನಿರ್ವಹಿಸಲಿವೆ. ಸಿಹಿ ಖಾದ್ಯದ ಜತೆಗೆ ಶಾಲೆಗಳನ್ನು ಅಲಂಕರಿಸಿ ಹಬ್ಬದ ವಾತಾವರಣ ಮೂಡಿಸುವಂತೆ […]
ಮಿಷನ್ ಕರ್ನಾಟಕ ಟು ಕಾಶಿ; ಕರ್ನಾಟಕದಿಂದ ವಾರಣಾಸಿಗೆ ಶೀಘ್ರವೆ ವಿಶೇಷ ರೈಲು: ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆಯು ವಾರಣಾಸಿಗೆ (ಕಾಶಿ) ವಿಶೇಷ ರೈಲನ್ನು ಆಯೋಜಿಸುತ್ತಿದ್ದು, ಪ್ರತಿ ವರ್ಷ 30,000 ಕಾಶಿ ಯಾತ್ರಾರ್ಥಿಗಳಿಗೆ ತಲಾ 5,000 ರೂ.ಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ರೈಲ್ವೆ ಸಚಿವರೊಂದಿಗೆ ಮಾತನಾಡಿದ್ದು, ಅವರ ಸಲಹೆಯಂತೆ ಭಾರತ್ ಗೌರವ್ ಪ್ರವಾಸೋದ್ಯಮ ಯೋಜನೆಯಡಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ ಹಳೆಯ ರೈಲುಗಳನ್ನು ಪ್ರವಾಸೋದ್ಯಮಕ್ಕಾಗಿ ಗುತ್ತಿಗೆಗೆ ತೆಗೆದುಕೊಳ್ಳಲಾಗುವುದು. ಈ ರೈಲುಗಳ ನೋಂದಣಿಗಾಗಿ 1 ಲಕ್ಷ ರೂಪಾಯಿಯನ್ನು ಈಗಾಗಲೇ ಪಾವತಿಸಲಾಗಿದೆ. ಈ ರೈಲುಗಳು […]
ಸಾಹಿತ್ಯ ಕಮ್ಮಟ ನಡೆಸಲು ಅರ್ಜಿ ಆಹ್ವಾನ

ಉಡುಪಿ, ಮೇ 05 (ಕವಾ): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರಸಕ್ತ ಸಾಲಿನ ಜುಲೈ ತಿಂಗಳಲ್ಲಿ ಸಂತ ಸಾಹಿತ್ಯ ಅಧ್ಯಯನ ಶಿಬಿರ ಎಂಬ ರಾಜ್ಯ ಮಟ್ಟದ 5 ದಿನಗಳ ಕಮ್ಮಟ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ http://sahithyaacademy.karnataka.gov.in ಅನ್ನು ಸಂಪರ್ಕಿಸುವಂತೆ ಅಕಾಡೆಮಿಯ ರಿಜಿಸ್ಟ್ರಾರ್, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.