ಕಾಪು; ಮನೆಗೊಂದರಂತೆ ಉದ್ಯೋಗ ಒದಗಿಸಿಕೊಡುವ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಚಾಲನೆ: ಸೊರಕೆ

ಕಾಪು : ಸಣ್ಣ ಕೈಗಾರಿಕೆಗೆ ಒತ್ತು ಕೊಟ್ಟು ಮನೆಗೊಬ್ಬರಿಗೆ ಉದ್ಯೋಗ ನೀಡುವ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಶಾಸಕನಾದ ಕೂಡಲೇ ಚಾಲನೆ ನೀಡಲಾಗುವುದು ಎಂದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಮಾರ್‌ ಸೊರಕೆ ಹೇಳಿದ್ದಾರೆ. ಮಣಿಪಾಲ ಟೆಕ್ನಾಲಜಿ ಸಮೂಹ ಸಂಸ್ಥೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಅವರು ಕಾರ್ಮಿಕರೇ ಈ ದೇಶದ ನಿಜವಾದ ಸಂಪತ್ತು. ಮಣಿಪಾಲ ಗ್ರೂಫ್ಸ್ ತಾಂತ್ರಿಕ ಸಂಸ್ಥೆಗಳು ದೇಶ ಮಾತ್ರವಲ್ಲದೇ ಪ್ರಪಂಚದಾದ್ಯಂತ ಸುದ್ಧಿಯಲ್ಲಿವೆ. ಗ್ರಾಮೀಣ ಭಾಗದ ಸಾವಿರಾರು ಮಂದಿಗೆ ಉದ್ಯೋಗ ನೀಡುವ ಮಹತ್ಕಾರ್ಯ ಮಣಿಪಾಲ ಸಮೂಹ […]