Belthangadi; ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಮಹಾ ಸಂಪರ್ಕ ಅಭಿಯಾನ ಯಶಸ್ವಿ
ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಮಹಾ ಸಂಪರ್ಕ ಅಭಿಯಾನದಡಿ ಬೆಳ್ತಂಗಡಿ ಮಂಡಲದಲ್ಲಿ ಬಿಜೆಪಿ ಅಭ್ಯರ್ಥಿ, ಶಾಸಕ ಹರೀಶ್ ಪೂಂಜ ಅವರ ಪರ 20 ಸಾವಿರ ಕಾರ್ಯಕರ್ತರು 50 ಸಾವಿರ ಮನೆಗಳನ್ನು ಸಂಪರ್ಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಿದರು. ಬೆಳ್ತಂಗಡಿ ಮಂಡಲದ 81 ಗ್ರಾಮಗಳ 241 ಬೂತ್ಗಳಲ್ಲಿ ಮಹಾಸಂಪರ್ಕ ಅಭಿಯಾನ ಹಮ್ಮಿಕೊಂಡಿದ್ದು ಮತದಾರರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು. ಒಂದೇ ದಿನ 20 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಉತ್ಸುಕತೆಯಿಂದ ಪಾಲ್ಗೊಂಡು 50 ಸಾವಿರಕ್ಕೂ ಅಧಿಕ ಮನೆಗಳಿಗೆ ಭೇಟಿ […]