ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬೊಮ್ಮಾಯಿ: ಇಂದು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ನಿರ್ಧಾರ
ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. “ನಾನು ನನ್ನ ರಾಜೀನಾಮೆಯನ್ನು ನೀಡಿದ್ದೇನೆ ಮತ್ತು ಅದನ್ನು ಅಂಗೀಕರಿಸಲಾಗಿದೆ” ಎಂದು ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿದ್ದು, ಬಿಜೆಪಿ 65 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗಳಿಸಿದೆ. ಫಲಿತಾಂಶಗಳನ್ನು ಒಪ್ಪಿಕೊಂಡಿರುವ ಬೊಮ್ಮಾಯಿ, ಬಹುಮತ ಪಡೆಯಲು ಸಾಧ್ಯವಾಗದ ಕೊರತೆಗಳನ್ನು ವಿಶ್ಲೇಷಿಸುವುದಾಗಿ ಹೇಳಿದ್ದಾರೆ. ಪ್ರಧಾನಿ ಮತ್ತು ಬಿಜೆಪಿ ಕಾರ್ಯಕರ್ತರು […]