ಕೊರೊನಾ ವೈರಸ್ ಭಯ ಬೇಡ, ಆದ್ರೆ ಎಚ್ಚರವಿರಲಿ- ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಇತ್ತೀಚೆಗೆ ಕೇಳಿ ಬರುತ್ತಿರುವ ಕೊರೊನಾ ವೈರಸ್ ನಿಂದ ಹರಡುವ ರೋಗದ ಕುರಿತಂತೆ ಸಾರ್ವಜನಿಕರು ಯಾವುದೇ ಆತಂಕ ಅಥವಾ ಭಯ ಪಡುವ ಅಗತ್ಯವಿಲ್ಲ ಆದರೆ ರೋಗದ ಲಕ್ಷಣಗಳನ್ನು ತಿಳಿದುಕೊಂಡು ಈ ಬಗ್ಗೆ ಎಚ್ಚರ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ, ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕದಲ್ಲಿ ಇದುವರೆಗೂ ಕೊರೊನಾ ವೈರಸ್ ಸೋಂಕಿತ ಯಾವುದೇ ಪ್ರಕರಣ ವರದಿಯಾಗಿಲ್ಲ, ಆದರೂ ಸಹ ನೆರೆಯ […]