ನ.17 ರಂದು ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಮನೆಗೊಂದು ದೀಪ ರಂಗಪೂಜೆ
ಕಾರ್ಕಳ: ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕೊರಂಗ್ರಪಾಡಿ ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ಕಾರ್ತಿಕ ದೀಪೋತ್ಸವ ಮನೆಗೊಂದು ದೀಪ ರಂಗಪೂಜೆ ನ.17 ರಂದು ಸಂಜೆ 6.30 ರಿಂದ ನಡೆಯಲಿರುವುದು. ಈ ಪುಣ್ಯ ದೀಪೋತ್ಸವ ಕಾರ್ಯದಲ್ಲಿ ಸಾರ್ವಜನಿಕರು ಭಾಗವಹಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಅರ್ಚಕ ರಂಗನಾಥ್ ಭಟ್ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಿವರಾಮ ಜಿ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.