ಕರಾವಳಿಯ ಮರಳು ಹೊರ ಜಿಲ್ಲೆಗೆ ಹೋಗದಂತೆ ಕಟ್ಟುನಿಟ್ಟಿನ ಕ್ರಮ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಒಂದು ಮುಷ್ಠಿ ಮರಳು ಹೊರ ಜಿಲ್ಲೆಗೆ ಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದರು. ಉಡುಪಿ ನಗರಸಭೆಯಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತೆಗೆಯುವ ಮರಳು ಇಲ್ಲಿಯ ನಿರ್ಮಾಣ ಕಾಮಗಾರಿಗಳಿಗೆ ವಿನಿಯೋಗಿಸಲಾಗುವುದು. ಬಡವರ ಮನೆ ನಿರ್ಮಾಣ, ವಿವಿಧ ಸರ್ಕಾರಿ ಯೋಜನೆಗಳಡಿ ನಿರ್ಮಿಸಲಾಗುವ ಕಟ್ಟಡ, ಮನೆಗಳಿಗೆ ಮೊದಲ ಆದ್ಯತೆಯಲ್ಲಿ ಮರಳು ಸಿಗುವಂತೆ ಕ್ರಮ ವಹಿಸಲಾಗುವುದು ಎಂದರು. ಮರಳಿನ ಸಮಸ್ಯೆಯಿಂದ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿದ್ದು, ಜನರಿಗೆ ಮರಳು ನೀಡಲೇ […]