ಸುರಕ್ಷತೆಗೆ ಪ್ರಾಧಿಕಾರವೇ ಹೊಣೆ ಎಂದ ಜಿಲ್ಲಾಡಳಿತ , ಕೊನೆಗೂ ಸುರಂಗ ಮಾರ್ಗದಲ್ಲಿ ತಾತ್ಕಾಲಿಕ ಸಂಚಾರಕ್ಕೆ ಅವಕಾಶ

ಕಾರವಾರ: ಕಳೆದ ಕೆಲ ದಿನಗಳಿಂದ ಆಕ್ಷೇಪ, ಹೋರಾಟ, ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದ್ದ ನಗರದ ಟನಲ್ ಮಾರ್ಗದಲ್ಲಿ ಕೊನೆಗೂ ಜಿಲ್ಲಾಡಳಿತ ಸೋಮವಾರ ಸಾರ್ವಜನಿಕ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರದಿಂದ – ಬಿಣಗಾದವರೆಗೆ ನಿರ್ಮಿಸಲಾಗಿದ್ದ ಸುರಂಗ ಮಾರ್ಗದಲ್ಲಿ ಸುರಕ್ಷತೆ ದೃಷ್ಟಿಯಿಂದ ಸಂಚಾರವನ್ನು ನಿಷೇಧಿಸಿ ಮೂರನೇ ಸಂಸ್ಥೆಯಿಂದ ತಪಾಸಣೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಲಾಗಿತ್ತು. ಆದರೆ, ಸುರಂಗ ಮಾರ್ಗದ ತಾಂತ್ರಿಕ ತಪಾಸಣೆಯನ್ನು ಅ.8 ರಂದು ನಿಗದಿಪಡಿಸಿರುವುದಾಗಿ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.ಕಾರವಾರದಲ್ಲಿ ಕಳೆದ 3 […]