ಕಾಸರಗೋಡು: ಬೈಕ್’ಗಳ ನಡುವೆ ಅಪಘಾತ – ಓರ್ವ ಮೃತ್ಯು, ಮೂವರಿಗೆ ಗಾಯ

ಕಾಸರಗೋಡು: ಮಂಗಳವಾರ ರಾತ್ರಿ ಚಟ್ಟಂಚಾಲ್ ನಲ್ಲಿ ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತ ಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ. ತೆಕ್ಕಿಲ್ ಬೆಂಡಿಚ್ಚಾಲ್ ನ ಮುಹಮ್ಮದ್ ತಸ್ಲೀಮ್ (20) ಮೃತಪಟ್ಟ ವಿದ್ಯಾರ್ಥಿ. ಚಟ್ಟಂಚಾಲ್ ಸಬ್ ಟ್ರೆಜರಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ತಸ್ಲೀಮ್ ಮಂಗಳೂರಿನ ಕಾಲೇಜೊಂದರ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ. ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.