ದೇಶದ ಇತಿಹಾಸದಲ್ಲಿ ಅತಿ ದೊಡ್ಡ ಉಗ್ರರ ಕೃತ್ಯ

ಶ್ರೀನಗರ: ಸರ್ಜಿಕಲ್ ಸ್ಟ್ರೈಕ್ ನಡೆದರೂ ಪಾಕಿಸ್ತಾನ ಪ್ರಾಯೋಜಿತ ಉಗ್ರರಿಗೆ ಬುದ್ಧಿ ಬಂದಿಲ್ಲ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಬಸ್ಸಿನಲ್ಲಿದ್ದ 42 ಮಂದಿ ಸಿಆರ್‌ಪಿಎಫ್‌ ಯೋಧರು ಹುತಾತ್ಮರಾಗಿದ್ದಾರೆ. ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ದೇಶದ ಸೇನಾ ಇತಿಹಾಸದಲ್ಲಿ ಅತಿ ದೊಡ್ಡ ಉಗ್ರರ ದಾಳಿ ಇದಾಗಿದೆ. ದಾಳಿಯಲ್ಲಿ 45 ಮಂದಿ ಗಾಯಗೊಂಡಿದ್ದು, 18 ಯೋಧರ ಸ್ಥಿತಿ ಗಂಭೀರವಾಗಿದೆ. ಗೋರಿಪೋರ ಪ್ರದೇಶದಲ್ಲಿ ಉಗ್ರರು ಸುಧಾರಿತ ಸ್ಫೋಟಕ ಬಳಸಿ ಸಿಆರ್‌ಪಿಎಫ್‌ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ […]