ಕಟಪಾಡಿ: ಡಿ.17 ರಂದು ಹೈಟೆಕ್ ಮೆಡಿಕೇರ್ ಆಸ್ಪತ್ರೆಯ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕಟಪಾಡಿ: ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಇದರ ಆಶ್ರಯದಲ್ಲಿ ಹೈಟೆಕ್ ಮೆಡಿಕೇರ್ ಆಸ್ಪತ್ರೆ ಅಂಬಲಪಾಡಿ ಇದರ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಡಿ.17 ರಂದು ಭಾನುವಾರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಕಟಪಾಡಿಯ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನಡೆಯಲಿರುವುದು. ಹೈಟೆಕ್ ಆಸ್ಪತ್ರೆಯ ಮೆಡಿಸಿನ್ ವಿಭಾಗ, ಸ್ತ್ರೀರೋಗ ವಿಭಾಗ, ಕಿವಿ, ಮೂಗು ಗಂಟಲು ವಿಭಾಗಗಳ ಖ್ಯಾತ ವೈದ್ಯರಿಂದ ತಪಾಸಣೆ ನಡೆಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ.