ಸೆ.29ರಿಂದ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ
ಕಟಪಾಡಿ: ಉಡುಪಿ ಕಟಪಾಡಿಯ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಸೆ. 29 ರಿಂದ ಪ್ರಾರಂಭಗೊಂಡು ಅ.7ರ ವರೆಗೆ ಜರಗಲಿದೆ. ಆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ನಿತ್ಯ ಭಜನೆ, ಸಾಂಸ್ಕೃತಿಕ, ದಾಂಡಿಯಾ ನೃತ್ಯ ಕಾರ್ಯಕ್ರಮಗಳೊಂದಿಗಳು ನಡೆಯಲಿವೆ. ಅ. 6 ರಂದು ಬೆಳಿಗ್ಗೆ 9 ಗಂಟೆಗೆ ಮಹಾ ಚಂಡಿಕಾಯಾಗ ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎನ್. ಶಂಕರ್ ಪೂಜಾರಿ, ಪದಾಧಿಕಾರಿಗಳು, ಸರ್ವ ಸದಸ್ಯರ ಪ್ರಕಟನೆ ತಿಳಿಸಿದೆ.