ಕಟಪಾಡಿ: ಜು 29-30 ರಂದು ಎಸ್.ವಿ.ಎಸ್ ಹೈಸ್ಕೂಲ್ ನಲ್ಲಿ ಹಲಸು ಮೇಳ
ಕಟಪಾಡಿ: ಯುವ ಜನ ಸೇವಾ ಸಂಘ ಏಣಗುಡ್ಡೆ ಕಟಪಾಡಿ ಹಾಗೂ ತೋಟಗಾರಿಕೆ ಮತ್ತು ಕೃಷಿ ಇಲಾಖೆ ಉಡುಪಿ ಇದರ ಸಹಯೋಗದೊಂದಿಗೆ ಜುಲೈ 29 ಮತ್ತು 30 ರಂದು ಕಟಪಾಡಿಯ ಎಸ್.ವಿ.ಎಸ್ ಹೈಸ್ಕೂಲ್ ನಲ್ಲಿ ಪ್ರಥಮ ಬಾರಿಗೆ 2 ದಿನದ ಹಲಸು ಮೇಳವನ್ನು ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಉಡುಪಿಯ ನಿರ್ದೇಶಕ ಹೇಮಂತ್ ಕುಮಾರ್, ಕಾಪು ಪೊಲೀಸ್ ಠಾಣಾ ಸಬ್ ಇನ್ ಸ್ಪೆಕ್ಟರ್ ಶೈಲ ಮುರಗೊಡ್, ಎಸ್. […]
ಜುಲೈ 3 ರಿಂದ ಸೆ. 29 ವರೆಗೆ ಆನೆಗುಂದಿ ಮಹಾಸಂಸ್ಥಾನದ ಜಗದ್ಗುರುಗಳ 19ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ
ಕಟಪಾಡಿ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 19ನೇ ವರ್ಷದ ಶೋಭಕೃತ್ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 3 ರಿಂದ ಸೆಪ್ಟೆಂಬರ್ 29 ವರೆಗೆ ಶ್ರೀ ಸರಸ್ವತೀ ಸತ್ಸಂಗ ಮಂದಿರ, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪಡುಕುತ್ಯಾರು ಇಲ್ಲಿ ಜರುಗಲಿದೆ. ಜುಲೈ 15 ರಂದು ಆನೆಗುಂದಿ ಶ್ರೀಗಳವರ ಜನ್ಮ ವರ್ಧಂತಿ ಹಾಗೂ ಶ್ರೀ ನಾಗಧರ್ಮೇಂದ್ರ ಸರಸ್ವತೀ ವಿದ್ಯಾರ್ಥಿ ಭವನ ಉದ್ಘಾಟನೆ ನಡೆಯಲಿದೆ.
ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಅಗ್ನಿ ಅವಘಡ ತಡೆಯುವಿಕೆ ಕಾರ್ಯಾಗಾರ
ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಅಗ್ನಿ ಶಾಮಕದಳ ಉಡುಪಿ ಇದರ ಸಹಯೋಗದೊಂದಿಗೆ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆಯನ್ನು ಶನಿವಾರದಂದು ಹಮ್ಮಿಕೊಳ್ಳಲಾಯಿತು. ಅಗ್ನಿ ಶಾಮಕ ದಳದ ಅಧಿಕಾರಿಗಳಾದ ಸತೀಶ್ ಎನ್. ಮತ್ತು ತಂಡವು ಬೆಂಕಿ ಅವಘಡದ ಕಾರಣಗಳು ಹಾಗೂ ಬೆಂಕಿ ಅವಘಡಗಳನ್ನು ತಡೆಯುವ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿ, ಪ್ರಾಯೋಗಿಕ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು. ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೋ. ಗುರುಪ್ರಸಾದ್ ರಾವ್, ತ್ರಿಶಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೋ. […]
ಕಟಪಾಡಿ: ಬಬ್ಬುಸ್ವಾಮಿ ವ್ಯೆದ್ಯನಾಥೇಶ್ವರ ದೈವಸ್ಥಾನಕ್ಕೆ ಭೇಟಿ ನೀಡಿದ ವಿನಯ್ ಕುಮಾರ್ ಸೊರಕೆ
ಉಡುಪಿ: ಕಾಪು ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಇಂದು ಕಿನ್ನಿಗುಡ್ಡೆ ಬಬ್ಬು ಸ್ವಾಮಿ ವ್ಯೆದ್ಯನಾಥೇಶ್ವರ ಪರಿವಾರ ದೈವಗಳ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಸೇವೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.
ಕಟಪಾಡಿ: ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಶಿಕ್ಷಕ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕಟಪಾಡಿ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿವಿಧ ಕೋರ್ಸ್ ಗಳಿಗೆ ಉತ್ಕೃಷ್ಟ ಗುಣಮಟ್ಟದ ಕೋಚಿಂಗ್ ತರಗತಿಗಳನ್ನು ನಡೆಸುತ್ತಿರುವ ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಖಾಲಿ ಇರುವ ಹುದ್ದೆಗಳು: 1.ಭಾಷಾ ಶಿಕ್ಷಕರು (ಪಾರ್ಟ್ ಟೈಮ್) 2.ವಿಜ್ಞಾನ ವಿಷಯ ಬೋಧಕರು 3.ವಾಣಿಜ್ಯ ವಿಷಯ ಬೋಧಕರು 4.ಲ್ಯಾಬ್ ಅಟೆಂಡರ್ ಗಳು ಎಲ್ಲಾ ಹುದ್ದೆಗಳಿಗೂ ಆಯಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮತ್ತು 2 ವರ್ಷಕ್ಕಿಂತ ಹೆಚ್ಚಿನ ಬೋಧನ ಅನುಭವ […]