ಶ್ರೀ ಕ್ಷೇತ್ರ ಕಟೀಲು ಬ್ರಹ್ಮಕಲಶೋತ್ಸವದ ಸಿದ್ಧತೆ ಭರದಿಂದ ಸಾಗ್ತಿದೆ: ಉಮಾನಾಥ ಕೋಟ್ಯಾನ್

ಮಂಗಳೂರು: ಶ್ರೀಕ್ಷೇತ್ರ ಕಟೀಲು ಬ್ರಹ್ಮಕಲಶೋತ್ಸವದ ಸಿದ್ಧತೆ ವೇಗದಿಂದ ಸಾಗುತ್ತಿದೆ ಈಗಾಗಲೇ ಧಾರ್ಮಿಕ, ಸಾಂಸ್ಕೃತಿಕ, ಭಜನಾ ಮತ್ತು ಸಭಾ ಕಾರ್ಯಕ್ರಮಗಳ ಸಿದ್ಧತೆಯಾಗಿದೆ. ಜ.22ರಿಂದ ಫೆ.3 ರ ತನಕ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದರು. ಅವರು ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಜ.24ರಂದು ಸುವರ್ಣ ಧ್ವಜಪ್ರತಿಷ್ಠೆ, 3೦ರಂದು ಬ್ರಹ್ಮಕಲಶ, ಫೆ.೧ರಂದು ನಾಗಮಂಡಲ, ೨ರಂದು ಕೋಟಿಜಪ ಯಜ್ಞ ಹಾಗೂ ೩ರಂದು ಸಹಸ್ರ ಚಂಡಿಕಾಯಾಗ ನಡೆಯಲಿದೆ. ಹದಿಮೂರು ದಿನಗಳ ಕಾಲ ನಡೆಯುವ ಈ ಉತ್ಸವವನ್ನು ಯಶಸ್ವಿಯಾಗಿ […]