ಕಟೀಲು ಶ್ರೀ‌ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ ಹಿನ್ನಲೆ: ಸಂಸದರಿಂದ ವಿವಿಧ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ 2020ರ ಜನವರಿ 22 ರಿಂದ ನಡೆಯಲಿದ್ದು, ಹೀಗಾಗಿ ಕಟೀಲು ಪರಿಸರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಭರದಿಂದ ನಡೆಯುತ್ತಿವೆ. ಗುರುವಾರ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಶ್ರೀ ಹರಿನಾರಾಯಣ ಆಸ್ರಣ್ಣರು, ಶ್ರೀ ಭುವನಾಭಿರಾಮ ಉಡುಪ ಅವರು, ಶಾಸಕಾಂಗದಿಂದ ಉಮಾನಾಥ್ ಕೋಟ್ಯಾನ್, ಮುಲ್ಕಿ-ಮೂಡಬಿದ್ರೆ […]