ಡಿ.7 ರಿಂದ ಕಟೀಲು ಯಕ್ಷಗಾನ ಮಂಡಳಿಯ ಆರು ಮೇಳಗಳ ತಿರುಗಾಟ; ಒಟ್ಟು 1002 ಸೇವೆಯಾಟ ಪ್ರದರ್ಶನ
ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ತಿರುಗಾಟ ಡಿ. 7 ರಿಂದ ಪ್ರಾರಂಭವಾಗಲಿದೆ. ಸಂಜೆ 5.15 ಗಂಟೆಗೆ ದೇವಸ್ಥಾನದಲ್ಲಿ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ. ಸಂಜೆ 6.45 ರಿಂದ ಕಲಾವಿದರಿಗೆ ಗೆಜ್ಜೆ ಹಸ್ತಾಂತರ, ರಾತ್ರಿ 8.30ಕ್ಕೆ ಚೌಕಿ ಪೂಜೆ, ಬಳಿಕ ಆರು ರಂಗಸ್ಥಳಗಳಲ್ಲಿ ಏಕಕಾಲಕ್ಕೆ ಪೂರ್ವರಂಗ ಪ್ರದರ್ಶನ, 10.30ಕ್ಕೆ ಪಾಂಡವಾಶ್ವಮೇಧ ಯಕ್ಷಗಾನ ಬೆಳಗ್ಗಿನ ಜಾವದವರೆಗೆ ನಡೆಯಲಿದೆ ಎಂದು ಕಟೀಲು ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಈ […]