ಕಾಪು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಖಾಸಗಿ ಬಸ್: ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಕಾಪುವಿನ ಉಳಿಯಾರಗೋಳಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಉಡುಪಿ – ಶಿರ್ವ ನಡುವೆ ಸಂಚರಿಸುತ್ತಿದ್ದ ಮಿಲಾನ್ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಸರಿದು ನಿಂತಿದೆ. ತಕ್ಷಣವೇ ಸ್ಥಳೀಯರು ಕಾರ್ಯಾಚರಣೆ ನಡೆಸಿ, ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಮುಂಭಾಗಕ್ಕೆ ಹಾನಿಯಾಗಿದೆ. ಕಾಪು ಪೋಲಿಸರು ಸ್ಥಳಕ್ಕೆ ಬಂದು ಸುಗಮ […]