ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆ ಪ್ರಕರಣ: ಪತಿ ಬಂಧನ

ಕಾಪು: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಜ್ಯೋತಿ(32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ರವಿ ಕುಮಾರ್(35) ಬಂಧಿತ ವ್ಯಕ್ತಿ. ಈತ ಕೆಎಸ್‌ಆರ್‌ಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, 2017ರಲ್ಲಿ ತನ್ನದೇ ಊರಿನ ಜ್ಯೋತಿಯನ್ನು ಮದುವೆಯಾಗಿದ್ದ. ಜ್ಯೋತಿ ಕಾಪು ಠಾಣಾ ಸಿಬ್ಬಂದಿಯಾಗಿರುವುದರಿಂದ ಠಾಣೆಯ ಸಮೀಪದಲ್ಲೇ ಇರುವ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು. ಜ್ಯೋತಿ ಆತ್ಮಹತ್ಯೆ ಮಾಡಿಕೊಂಡ ರೂಮಿನಲ್ಲಿ ಒಂದು ಡೈರಿ ಸಿಕ್ಕಿದ್ದು, ಅದರಲ್ಲಿ ತನ್ನ ಸಾವಿಗೆ ತನ್ನ ಗಂಡನ […]