ಕಾಪು: ಅ.16 ರಂದು ಜನತಾ ದರ್ಶನ ಕಾರ್ಯಕ್ರಮ

ಕಾಪು: ಅ.16 ರಂದು ಬೆಳಿಗ್ಗೆ 10 ಗಂಟೆಗೆ ಕಾಪು ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾಪು ತಾಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಮತ್ತು ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಅಥವಾ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.  

ಅಧಿಕಾರಕ್ಕೆ ಬಂದರೆ 94 ಸಿ ಅರ್ಜಿಗಳಿಗೆ ಮರುಜೀವ: ವಿನಯ್ ಕುಮಾರ್ ಸೊರಕೆ

ಉಡುಪಿ: ಶಾಸಕನಾಗಿದ್ದ ಕಾಲದಲ್ಲಿ ಶಿಫಾರಸು ಮಾಡಿದ್ದ 94 ಸಿ ಅರ್ಜಿಗಳು ಗೆದ್ದಲು ಹಿಡಿದಿದ್ದು ಅವುಗಳಿಗೆ ಮರು‌ಜೀವ ಕೊಟ್ಟು ಬಡವರಿಗೆ ಮನೆ ಮಂಜೂರಾತಿ ಮಾಡುವ ಕೆಲಸವನ್ನು ಮಾಡಲಾಗುವುದು. 94 ಸಿ ಕಾನೂನು ಮತ್ತು ಅಕ್ರಮ‌ ಸಕ್ರಮ ಯೋಜನೆಯಡಿ 2 ಸಾವಿರ ಅರ್ಜಿಗಳನ್ನು ಶಿಫಾರಸು ಮಾಡಿದ್ದರೂ ಅವುಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ ಎಂದು ಕಾಪು ವಿಧನಾಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದರು. ಮೇ.1 ರಂದು ಪೆರ್ಡೂರು ಪೇಟೆಯಲ್ಲಿ‌ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ರಸ್ತೆ […]

ಕಾಪು: ಪಂಚಾಯತ್ ಸದಸ್ಯ ಮಿತೇಶ್ ಸುವರ್ಣ ಬಿಜೆಪಿ ಸೇರ್ಪಡೆ

ಕಾಪು: ಉದ್ಯಾವರ ಗ್ರಾಮ‌ ಪಂಚಾಯತ್ ನ ಸದಸ್ಯ ಯುವ ನಾಯಕ ಮಿತೇಶ್ ಸುವರ್ಣ ಅವರು ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಇವರ ನೇತೃತ್ವದಲ್ಲಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಲಾಲಾಜಿ ಆರ್ ಮೆಂಡನ್, ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಇವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಬಳಿಕ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಮಿತೇಶ್ ಸುವರ್ಣ ಸೇರ್ಪಡೆಯಿಂದ ಉದ್ಯಾವರದಲ್ಲಿ ನಮ್ಮ‌ ಪಕ್ಷಕ್ಕೆ […]

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ: ಸಾವಿರಾರು ಅಭಿಮಾನಿಗಳು ಭಾಗಿ

ಕಾಪು: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಸಾವಿರಾರು ಮಂದಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆ ಮೆರವಣಿಗೆ ನಡೆಸಿ, ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಲಾಲಾಜಿ‌ ಆರ್. ಮೆಂಡನ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ರಘುಪತಿ ಭಟ್, ಉಡುಪಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, […]

ಬಬ್ಬುಸ್ವಾಮಿ ದೈವಸ್ಥಾನಕ್ಕೆ ಭೇಟಿ ನೀಡಿದ ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ

ಉಡುಪಿ: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾದ ಗುರ್ಮೆ ಸುರೇಶ್ ಶೆಟ್ಟಿಯವರು ಶುಕ್ರವಾರದಂದು ಕೊಂಬಗುಡ್ಡೆ ಮಲ್ಲಾರ್,ಉಚ್ಚಿಲ, ಮುಳೂರ್, ಕಾಪು, ಉಳಿಯಾರಗೋಳಿ, ಕಟಪಾಡಿ ಪೇಟೆಬೆಟ್ಟು, ಗುಡ್ಡೆಯಂಗಡಿ, ಉದ್ಯಾವರ, ಬಬ್ಬುಸ್ವಾಮಿ ದೈವಸ್ಥಾನಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಲಾಲಾಜಿ ಆರ್ ಮೆಂಡನ್ ಸೇರಿದಂತೆ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.