ಕಾಪು: ಸ್ಮಶಾನ ಭೂಮಿಗಾಗಿ ಅರ್ಜಿ ಸಲ್ಲಿಸಲು ಆಹ್ವಾನ
ಕಾಪು: ಜಿಲ್ಲೆಯ ಎಲ್ಲಾ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದ್ದು, ಕಾಪು ತಾಲೂಕು ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಸ್ಮಶಾನ ನಿರ್ಮಾಣಕ್ಕೆ ಜಮೀನಿನ ಅವಶ್ಯಕತೆ ಇದ್ದಲ್ಲಿ ಬೇಡಿಕೆಗಳನ್ನು ತಾಲೂಕು ತಹಶೀಲ್ದಾರರು ಅಥವಾ ಗ್ರಾಮ ವ್ಯಾಪ್ತಿಯ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸ್ಮಶಾನ ಭೂಮಿ ಅವಶ್ಯಕತೆಯ ಬಗ್ಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳು ಮನವಿಯ ಜೊತೆಗೆ ಹೆಸರು, ತಂದೆಯ ಹೆಸರು, ಆಧಾರ್ ಕಾರ್ಡ್ ನಂಬರ್, ಗ್ರಾಮದ ಹೆಸರು, ನಗರ, ತಾಲೂಕು […]
ಫೆ. 28 ರಂದು ವಿದ್ಯುತ್ ವ್ಯತ್ಯಯ
ಉಡುಪಿ: 33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ ರೀ-ಕಂಡಕ್ಟರಿಂಗ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಸದರಿ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳು, ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಳ, ಶಿರ್ವ ಹಾಗೂ ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಿಲಾರು ಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ, ಮಲ್ಲಾರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು ಬಡಾ ಗ್ರಾಮ(ಉಚ್ಚಿಲ), ಮೂಳೂರು, ಬೆಳಪು, ಅಬ್ಬೇಟ್ಟು, ಪಾದೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫೆಬ್ರವರಿ 28 […]
ಕಾಪು: ಬಿಜೆಪಿ ಯುವಮೋರ್ಚಾ ವತಿಯಿಂದ ಮರಳು ಶಿಲ್ಪ ರಚಿಸಿ ವಿಜಯ ಸಂಕಲ್ಪ ಅಭಿಯಾನ
ಕಾಪು: ಬಿಜೆಪಿ ಯುವಮೋರ್ಚಾ ವತಿಯಿಂದ ಸೋಮವಾರ ಕಾಪು ಬೀಚ್ ದೀಪಸ್ಥಂಭದ ಬಳಿ ಮರಳು ಶಿಲ್ಪ ರಚಿಸಿ ಸದಸ್ಯತ್ವ ಅಭಿಯಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಭಾಗವಹಿಸಿ ಶುಭಹಾರೈಸಿದರು. ಕಾಪು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ನೇತೃತ್ತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಶ್ವೇತಾ, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, […]
ಕಾಪು: ಫೆ. 4- 5ರಂದು ‘ಕೋಸ್ಟಲ್ ಆಟೋ ಕಾರ್ನಿವಲ್- 2023’ ಸಾಹಸ ಪ್ರದರ್ಶನ ಕಾರ್ಯಕ್ರಮ
ಉಡುಪಿ: ಫೆ. 4 ಮತ್ತು 5ರಂದು ಕಾಪುವಿನಲ್ಲಿ ‘ಕೋಸ್ಟಲ್ ಆಟೋ ಕಾರ್ನಿವಲ್- 2023’ ಸಾಹಸ ಪ್ರದರ್ಶನ ಕಾರ್ಯಕ್ರಮವು ಕಾಪುವಿನ ಪ್ಯಾಲೇಸ್ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕ ಸುದೀಪ್ ಶೆಟ್ಟಿ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು. ಗೋವಾ ಮತ್ತು ಇತರ ಉತ್ತರ ಭಾರತದ ರಾಜ್ಯಗಳಲ್ಲಿ ಮಾಡಲಾಗುತ್ತಿದ್ದ ಆಟೋ ಕಾರ್ನಿವಲ್ ಅನ್ನು ಮೊದಲ ಬಾರಿಗೆ ಕರಾವಳಿಯಲ್ಲಿ ಆಯೋಜಿಸಲಾಗುತ್ತಿದೆ. ಫೆ. 4 ರಂದು ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಅವಿಭಜಿತ ಜಿಲ್ಲೆಯ […]
ಜ. 29 ರಂದು ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ
ಉಡುಪಿ: ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ಕಾರ್ಯಕ್ರಮವು ಜನವರಿ 29 ರಂದು ಬೆಳಗ್ಗೆ 9 ಗಂಟೆಗೆ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ ಹಾಗೂ ಸಂಸ್ಥೆಗಳು ಭಾಗವಹಿಸಿ, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಡಿಪ್ಲೋಮಾ, ಐ.ಟಿ.ಐ, ಸ್ನಾತಕೋತ್ತರ ಹಾಗೂ ವಿವಿಧ […]