ಉಡುಪಿ ರಜತಮಹೋತ್ಸವ: ಕಾಪು- ಮಲ್ಪೆ ಬೀಚ್ ನಲ್ಲಿ ಸಮಾರಂಭ
ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಜತ ಉಡುಪಿ- ಬೀಚ್ ಉತ್ಸವ ಕಾರ್ಯಕ್ರಮವು ಜನವರಿ 20 ರಿಂದ 22 ರ ವರೆಗೆ ಮಲ್ಪೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಪು ತಾಲೂಕು ಆಡಳಿತ ಇವರ ವತಿಯಿಂದ ಉಡುಪಿ […]
ದೇಸೀ ಕ್ರ್ಯೂ ಸಂಸ್ಥೆಯಲ್ಲಿ ಉದ್ಯೋಗಾವಕಾಶ
ದೇಸೀ ಕ್ರ್ಯೂ ಸಂಸ್ಥೆಯಲ್ಲಿ ಉದ್ಯೋಗಾವಕಾಶವಿದ್ದು, ತಿಂಗಳಿಗೆ 20 ಸಾವಿರ ರೂಗಳ ವೇತನ ನೀಡಲಾಗುವುದು. ಅರ್ಹತೆಗಳು: # ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ತಯಾರಿರಬೇಕು # ಕೆಲಸದ ಸ್ಥಳ ಕಾಪು # ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯ ನೀಡಲಾಗುವುದು ಆಸಕ್ತರು 8618257511, 9326012660 ಕರೆಮಾಡಬಹುದು ಅಥವಾ [email protected] ಇ-ಮೇಲ್ ಮಾಡಬಹುದು ಅಥವಾ ನೇರವಾಗಿ ದೇಸೀ ಕ್ರ್ಯೂ, ರಾ.ಹೆ-66 ಕಾಪು ಇಲ್ಲಿ ಭೇಟಿ ನೀಡಬಹುದು.
ನ. 19 ರಂದು ಬೆಳ್ಳೆ ಗ್ರಾಮದಲ್ಲಿ ಡಿಸಿ ಗ್ರಾಮ ವಾಸ್ತವ್ಯ
ಉಡುಪಿ: ಕಾಪು ತಾಲೂಕಿನ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳೆ ಗ್ರಾಮದ ಗೀತಾಮಂದಿರ ಇಲ್ಲಿ ನವೆಂಬರ್ 19 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಡೆಯಲಿದ್ದು, ಬೆಳ್ಳೆ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.10 ರಂದು ಕಾಂಗ್ರೆಸ್ ನ ವಿವಿಧ ಸಮಿತಿಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಇದರ ಆಶ್ರಯದಲ್ಲಿ ವಿವಿಧ ಮುಂಚೂಣಿ ಘಟಕಗಳಾದ ಕಾಪು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಇಂಟಕ್ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಆರ್.ಜಿ.ಪಿ.ಆರ್.ಎಸ್ ಸಮಿತಿ, ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನ.10 ರಂದು ಸುರಭಿ ಹಾಲ್, ಕೊಟ್ನಕಟ್ಟೆಯಲ್ಲಿ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ-ಕಿರಿಯ ನಾಯಕರು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ವಿವಿಧ ಸ್ತರದ […]
ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಬೊಮ್ಮಾಯಿ
ಉಡುಪಿ: ಕನ್ನಡ ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ಮೀನುಗಾರರಿಗೆ ಅಗತ್ಯವಿರುವ ಹೆಚ್ಚುವರಿ ಸೀಮೆಎಣ್ಣೆ ಒದಗಿಸಲು ನಮ್ಮ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಹಾಗೂ ಮೀನುಗಾರರಿಗೆ ಸುಸಜ್ಜಿತ ಮನೆ ನಿರ್ಮಿಸಿಕೊಡುವ ಕಾರ್ಯ ಈಗಾಗಲೇ ಪ್ರಗತಿಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಸೋಮವಾರದಂದು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಜನಸಂಕಲ್ಪ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕರಾವಳಿ ಪ್ರದೇಶದ ಅಭಿವೃದ್ಧಿಗೆ ನರೇಂದ್ರ ಮೋದಿಯವರ ಸರ್ಕಾರ ಬಹಳಷ್ಟು […]