ಯಶ್ಪಾಲ್ ಸುವರ್ಣಗೆ ಜೀವ ಬೆದರಿಕೆ ಪ್ರಕರಣ: ಅಪರಾಧಿಯನ್ನು ಬಂಧಿಸಿದ ಠಾಣಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ಯುವಮೋರ್ಚಾ
ಕಾಪು: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಇವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವಬೆದರಿಕೆ ಒಡ್ಡಿದ ಆರೋಪಿಯನ್ನು ಬಂಧಿಸುವಂತೆ ಬಿಜೆಪಿ ಯುವಮೋರ್ಚಾ ಕಾಪು ಮಂಡಲದಿಂದ ಕಾಪು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಮಂಡಲದ ವತಿಯಿಂದ ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವಾಗಿ ಆರೋಪಿಯನ್ನು ಬಂಧಿಸುವ ಮೂಲಕ ತಮ್ಮ ಕರ್ತವ್ಯ ಪ್ರಜ್ಞೆಯನ್ನು ತೋರ್ಪಡಿಸಿದ ಕಾಪು ವೃತ್ತ ನೀರಿಕ್ಷಕ ಹಾಗೂ ಠಾಣಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಸಾಮಾಜಿಕ ಜಾಲತಾಣದಲ್ಲಿ ಯಶ್ ಪಾಲ್ ಸುವರ್ಣ ಹತ್ಯೆ ಬೆದರಿಕೆ: ದೂರು ದಾಖಲಿಸಿದ ಕಾಪು ಯುವ ಮೋರ್ಚಾ
ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಮಾಡುವ ಬೆದರಿಕೆ ಪೋಸ್ಟ್ ಮಾಡಿರುವ ಇನ್ಸ್ಟಾಗ್ರಾಮ್ ಖಾತೆಯ ದುಷ್ಕರ್ಮಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಪು ಯುವ ಮೋರ್ಚಾ ವತಿಯಿಂದ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್ ಹಾಗೂ ಕಾಪು ಪೊಲೀಸ್ ಠಾಣಾ ಉಪ ನಿರೀಕ್ಷಕರಿಗೆ ದೂರು ನೀಡಲಾಯಿತು. ಪ್ರಚೋದನಕಾರಿ ಪೋಸ್ಟ್ ಮೂಲಕ ಕೋಮು ಗಲಭೆಯನ್ನು ಸೃಷ್ಟಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ದುರುದ್ದೇಶ ಹೊಂದಿರುವ ಮತೀಯವಾದಿಗಳ […]
ಕಾಪು ಸಾರ್ವಜನಿಕ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ
ಕಾಪು : ಕರ್ನಾಟಕ ಸರಕಾರದ ಅಧೀನದಲ್ಲಿರುವ ಕಾಪು ಸಾರ್ವಜನಿಕ ಗ್ರಂಥಾಲಯ ಮತ್ತು ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದರ ಸಾರ್ವಜನಿಕ ಗ್ರಂಥಾಲಯಕ್ಕೆ ಕಥೆ, ಕಾದಂಬರಿ, ಆರೋಗ್ಯಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಹಾಗೂ ಧಾರ್ಮಿಕ ವಿಚಾರವಾದ ದೆಂದೂರ ಪಂಜುರ್ಲಿ ಪುಸ್ತಕವನ್ನು ಕೊಡುಗೆಯಾಗಿ ನೀಡಲಾಯಿತು. ಸಮಾಜ ಸೇವೆಯಲ್ಲಿ ರಾಷ್ಟ್ರೀಯ ಪುರಸ್ಕೃತರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಮತ್ತು ದಿವಾಕರ ಡಿ ಶೆಟ್ಟಿ ಕಳತ್ತೂರು ಇವರ ನೇತೃತ್ವದಲ್ಲಿ ಕಾಪುವಿನ ಸಾರ್ವಜನಿಕ ಗ್ರಂಥಾಲಯದ ಮೇಲ್ವಿಚಾರಕರಾದ ಪೂರ್ಣಿಮಾ ಇವರಿಗೆ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ […]
ಕಾಪು ಬ್ಲಾಕ್ ಕಾಂಗ್ರೆಸ್ (ಉತ್ತರ) ಪ್ರಚಾರ ಸಮಿತಿ ಅಧ್ಯಕ್ಷರಾಗಿ ಚರಣ್ ವಿಠ್ಠಲ್ ಕುದಿ ಆಯ್ಕೆ
ಉಡುಪಿ: ಕಾಪು ಬ್ಲಾಕ್ ಕಾಂಗ್ರೆಸ್ (ಉತ್ತರ) ಪ್ರಚಾರ ಸಮಿತಿ ಅಧ್ಯಕ್ಷರಾಗಿ ಚರಣ್ ವಿಠ್ಠಲ್ ಕುದಿ ಆಯ್ಕೆಯಾಗಿದ್ದಾರೆ. ವಿನಯ್ ಕುಮಾರ್ ಸೊರಕೆ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಚರಣ್ ವಿಠ್ಠಲ್ ಅವರನ್ನು ಆಯ್ಕೆ ಮಾಡಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಾಯಿತು. ಈ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ , ಕಾಪು ಉತ್ತರ ವಲಯದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ ಕುಲಾಲ್ ಪಕ್ಕಾಲೂ , ಪ್ರಚಾರ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ದಿನೇಶ್ ಪುತ್ರನ್ ಹಾಗೂ […]
ಕಳತ್ತೂರು: ಮನೆ ತೊರೆದ ಹೆಂಡತಿ; ಖಿನ್ನನಾದ ಪತಿ ನೇಣಿಗೆ ಶರಣು
ಕಳತ್ತೂರು: ಹೆಂಡತಿ ಮನೆ ಬಿಟ್ಟು ಹೋದ ಕೊರಗಿನಿಂದ ಖಿನ್ನನಾದ ಪತಿ ನೇಣಿಗೆ ಶರಣಾದ ಘಟನೆ ಕಾಪು ತಾಲೂಕಿನ ಕಳತ್ತೂರಿನಲ್ಲಿ ಮೇ.16 ರಂದು ನಡೆದಿದೆ. ಕಳತ್ತೂರಿನ ನಿವಾಸಿ 38 ವರ್ಷದ ಸುನೀಲ್ ದೇವಪ್ರಸಾದ ಸೋನ್ಸ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು, ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಈ ಕಾರಣಕ್ಕಾಗಿ ಹೆಂಡತಿ ಪತಿಯನ್ನು ತೊರೆದು ಮನೆ ಬಿಟ್ಟು ಹೋಗಿದ್ದರು. ಈ ಕೊರಗಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಸುನೀಲ್, ಮೇ.16 ರಂದು ಮಧ್ಯಾಹ್ನ ಮನೆಯ ಮಾಡಿನ ಜಂತಿಗೆ ಶಾಲು […]