ಕೌಶಲ್ಯ ಉದ್ಯೋಗ ಅಭಿವೃದ್ಧಿ ತರಬೇತಿ ಶಿಬಿರ

ಉಡುಪಿ, ಜುಲೈ 4: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಮತ್ತು ಸಿಡಾಕ್, ಧಾರವಾಡ ಇವರ ಜಂಟಿ ಆಶ್ರಯದಲ್ಲಿ ಪರಿಶಿಷ್ಟ ಪಂಗಡದ ಸ್ವಉದ್ಯೋಗಾಂಕ್ಷಿಗಳಿಗೆ ಉಚಿತ ವಸತಿ ಊಟೋಪಚಾರ ಸಹಿತ 6 ದಿನಗಳ ಉದ್ಯೋಗ ಅಭಿವೃದ್ಧಿ ತರಬೇತಿ ಶಿಬಿರವನ್ನು ಮಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಸರಕಾರದ ವಿವಿಧ ಇಲಾಖೆಗಳಲ್ಲಿ ಸ್ವಯಂ ಉದ್ಯೋಗಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯವಿದ್ದು, ಉಳಿದ ಪರಿಶಿಷ್ಟ ಪಂಗಡದ ಸ್ವಉದ್ಯೋಗಾಂಕ್ಷಿಗಳಿಗೆ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದೆ. ಈ ಶಿಬಿರದಲ್ಲಿ ಸ್ವಂತ ಉದ್ಯೋಗಕ್ಕೆ ಬೇಕಾಗುವ ನಾಯಕತ್ವದ ಗುಣಗಳು, […]