ವಿಶ್ವ ಕೌಶಲ್ಯ ಸ್ಪರ್ಧೆ: ನೋಂದಾವಣೆಗೆ ನವೆಂಬರ್ 15 ಕೊನೆಯ ದಿನ

ಉಡುಪಿ: ಫ್ರಾನ್ಸಿನ ಲಿಯೋನ್‌ನಲ್ಲಿ ವಿಶ್ವ ಕೌಶಲ್ಯ ಸ್ಪರ್ಧೆ ನಡೆಯಲಿರುವ ಹಿನ್ನೆಲೆ ಇಂಡಿಯಾ ಸ್ಕಿಲ್ ಕಾಂಪಿಟೇಷನ್ ಕರ್ನಾಟಕ ಸ್ಪರ್ಧೆಗೆ ಪೂರ್ವಭಾವಿಯಾಗಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಅರ್ಹ ಅಭ್ಯರ್ಥಿಗಳನ್ನು ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಸಲುವಾಗಿ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅರ್ಹತಾ ಸುತ್ತುಗಳ ಆಯ್ಕೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಅರ್ಹತಾ ಸುತ್ತುಗಳಲ್ಲಿ ವಿಜೇತರಾದ ಸ್ಪರ್ಧಿಗಳು ವಿಶ್ವ ಕೌಶಲ್ಯ ಸ್ಪರ್ಧೆಗೆ ಆಯ್ಕೆಯಾಗಲಿದ್ದು, ಸ್ಪರ್ಧೆಯಲ್ಲಿ 2002 ಜನವರಿ 1 ರ ನಂತರ ಜನಿಸಿದ 17 […]

ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

ಉಡುಪಿ: ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಆಯೋಜಿಸಲಾಗಿರುತ್ತದೆ. ಪದವಿ ಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿಷಯ: ಕೈಗಾರಿಕಾ ಶೈಕ್ಷಣಿಕ ಒಗ್ಗೂಡುವಿಕೆಯಿಂದ ಕೌಶಲ್ಯದ ಅಂತರವನ್ನು ಕಡಿಮೆ ಮಾಡುವುದು, ಶಕ್ತಿಯುತ ಹಾಗೂ ಸುಸ್ಥಿರ ಬೆಳವಣಿಗೆಗಾಗಿ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಸೃಷ್ಟಿಸುವ ಮಾರ್ಗಗಳು, ಕೌಶಲ್ಯ ಮತ್ತು ಸಾಮರ್ಥ್ಯಗಳ ಮೇಲೆ ಕೇಂದ್ರೀಕೃತವಾದ ಉನ್ನತ ಶಿಕ್ಷಣದ […]