ಮಂಗಳೂರಿನಲ್ಲಿ ರದ್ದಾದ ಕಾವೇರಿ ಆನ್ ಲೈನ್ ಪೈಲಟ್ ಪ್ರಾಜೆಕ್ಟ್ ಉಡುಪಿಗೇತಕ್ಕೆ? ರಮೇಶ್ ಕಾಂಚನ್ ಆರೋಪ

ಉಡುಪಿ: ಭೂ ಮಾರಾಟ, ಖರೀದಿ ಇತ್ಯಾದಿ ದಾಖಲೆಗಳ ನೋಂದಣಿಯನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕ ನಡೆಸುವ ಸರಕಾರದ ಕಾವೇರಿ ವೆಬ್ ಪೋರ್ಟಲ್ ಸೇವೆಯನ್ನು ಮಂಗಳೂರು ತಾಲೂಕು ನೋಂದಾವಣಾ ಕಚೇರಿಯಲ್ಲಿ ಸಾರ್ವಜನಿಕರ ವಿರೋಧದ ಕಾರಣ ರದ್ಧು ಪಡಿಸಿರುವ ಬೆನ್ನಿಗೆ ಆ ಕಡ್ಡಾಯ ಆನ್‌ಲೈನ್ ಪ್ರಾಜೆಕ್ಟನ್ನು ಉಡುಪಿಯಲ್ಲಿ ಜಾರಿಗೊಳಿಸಲು ದಿಢೀರ್ ಯತ್ನ ನಡೆದಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದ್ದಾರೆ. ಮಂಗಳೂರು ತಾಲೂಕು ನೋಂದಣಾಧಿಕಾರಿಗಳ ಕಚೇರಿಯಲ್ಲಿ ಅಂತಹ ಪ್ರಯತ್ನ ನಡೆದಾಗ ಜನಸಾಮಾನ್ಯರೊಂದಿಗೆ ವಕೀಲರು, ದಸ್ತಾವೇಜು ಬರಹಗಾರರು […]