ಕಾಯಕ ಶುದ್ದಿಯಿಂದ ಆತ್ಮ ಶುದ್ದಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ವ್ಯಕ್ತಿಗಳು ತಾವು ಮಾಡುವ ಕಾಯಕವನ್ನು ಶ್ರದ್ದೆ ಮತ್ತು ಭಕ್ತಿಯಿಂಧ ಮಾಡುವುದರ ಮೂಲಕ ಮನಸ್ಸು ಮತ್ತು ಆತ್ಮವನ್ನು ಶುದ್ದಿ ಮಾಡಿಕೊಳ್ಳಬಹುದು ಎಂಬ ದೇವರ ದಾಸಿಮಯ್ಯ ಸಂದೇಶ ಎಲ್ಲ ಕಾಲಕ್ಕೂ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ನಡೆದ, ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬರೂ ತಾವು ಮಾಡುವ ಕೆಲಸವನ್ನು ಶ್ರದ್ದೆ ಮತ್ತು […]