ಕೆಡಿಪಿ ಸಭೆಗೆ ಎಲ್ಲಾ ಇಲಾಖಾಧಿಕಾರಿಗಳು ಬರಲೇಬೇಕು: ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಎಚ್ಚರಿಕೆ

ಕುಂದಾಪುರ: ಕೆಡಿಪಿ ಸಭೆ ನಡೆಸುವುದು ಕಾಟಾಚಾರಕ್ಕೆ ಅಲ್ಲ. ಎಲ್ಲಾ ಅಧಿಕಾರಿಗಳು ಹಾಜರಾಗದಿದ್ದರೆ ಕ್ರಮ ತೆಗೆದುಕೊಳ್ಳಬೇಕು. ಬಡವರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಸಡ್ಡೆ ತೋರಿದರೆ ನಾನು ಸುಮ್ಮನಿರೋದಿಲ್ಲ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ. ಅವರು ಶುಕ್ರವಾರ ಕುಂದಾಪುರ ತಾಲೂಕು ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಗೈರು ಹಾಜರಾತಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ವನ್ಯಜೀವಿಗಳ ರಕ್ಷಣೆ ಬಗ್ಗೆ ವೈಲ್ಡ್‌ಲೈಫ್ ಅಧಿಕಾರಿಗಳು ನಿಗಾ ಇಡಬೇಕು. […]