ಬೆಂದಕಾಳೂರೆಂಬ ಹಳ್ಳಿಯನ್ನು ನಗರವನ್ನಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ: ಪ್ರಸನ್ನ ಹೆಚ್

ಉಡುಪಿ: ಮಣ್ಣಿನ ಕೋಟೆಯಿಂದ ಕಟ್ಟಿದ ಹಳ್ಳಿ ಪ್ರದೇಶವಾಗಿದ್ದ ಬೆಂದಕಾಳೂರನ್ನು ನಗರವಾಗಿ ನಿರ್ಮಿಸಿದ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರಿಂದ, ಬೆಂಗಳೂರು ನಗರ ಇಂದು ದೇಶ-ವಿದೇಶಿಗರಿಗೆ ಚಿರಪರಿಚಿತವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕೆಂಪೇಗೌಡರು ಶೌರ್ಯ, ಸಾಹಸ, […]