29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ: ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ರಾಷ್ಟ್ರಕ್ಕೆ ಮಾದರಿಯಾಗುವ ವಿದ್ಯಾಸಂಸ್ಥೆಯನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಉಡುಪಿಯ ಪ್ರಗತಿನಗರದಲ್ಲಿ10 ಎಕ್ರೆ ಜಾಗದಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡವನ್ನು ಒಂದೂವರೆ ವರ್ಷದ ಒಳಗಾಗಿ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಸೋಮವಾರದಂದು ನಗರದ ಅಲೆವೂರು ಗ್ರಾಮದ ಪ್ರಗತಿನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಎದುರು ಉಡುಪಿಯ ಕೇಂದ್ರೀಯ ವಿದ್ಯಾಲಯ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ […]

51ನೇ ರಾಷ್ಟ್ರೀಯ ಕ್ರೀಡಾಕೂಟ: ಉಡುಪಿ ಸ್ವಿಮ್ಮಿಂಗ್ ಕ್ಲಬ್ ನ ಈಜು ಪಟು ಅನಜ್ಞಾ ರಾಣಿಗೆ ಬೆಳ್ಳಿ ಪದಕ

ಉಡುಪಿ: ಉಡುಪಿ ಸ್ವಿಮ್ಮಿಂಗ್ ಕ್ಲಬ್ ನ ಈಜು ಪಟು ಕುಮಾರಿ ಅನಜ್ಞಾ ರಾಣಿ ಇವರು ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನವೆಂಬರ್ 1ರಿಂದ 5 ರ ವರೆಗೆ ನಡೆದ ಕೇಂದ್ರೀಯ ವಿದ್ಯಾಲಯದ 51ನೇ ರಾಷ್ಟ್ರೀಯ ಕ್ರೀಡಾಕೂಟದ 14 ರ ವಯೋಮಿತಿಯ ಸ್ವಿಮ್ಮಿಂಗ್ ವಿಭಾಗದಲ್ಲಿ 100 ಮೀಟರ್ ಬ್ಯಾಕ್ ಸ್ಟ್ರೋಕ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ, 4X100 ಮೀಟರ್ ಮೆಡ್ಲೆರಿಲೆ ಯಲ್ಲಿ ಬೆಳ್ಳಿಯ ಪದಕ ಹಾಗೂ 4X100ಮೀಟರ್ ಫ್ರೀ ಸ್ಟೈಲ್ ರಿಲೇಯಲ್ಲಿ ಬೆಳ್ಳಿಯ ಪದಕವನ್ನು ಪಡೆದು ಮುಂದಿನ ಹಂತಕ್ಕೆ ಆಯ್ಕೆಯಾಗಿರುತ್ತಾರೆ. […]