ಕೆರಾಡಿ ಸರ್ಕಾರಿ ಶಾಲೆ ದತ್ತು ಸ್ವೀಕಾರಕ್ಕೆ ನಟ ರಿಷಬ್ ಶೆಟ್ಟಿ ನಿರ್ಧಾರ: ಕಲಿತ ಶಾಲೆ ಉಳಿವಿಗೆ ಪಣ

ಕುಂದಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲೂ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ತಾವು ಓದಿದ್ದ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದುಕೊಳ್ಳುವ ನಿರ್ಧಾರ ಮಾಡಿದ್ದಾರೆ. ಇತ್ತೀಚಿಗೆ ಹುಟ್ಟೂರು ಕೆರಾಡಿಗೆ ಭೇಟಿ ನೀಡಿದ್ದ ಅವರು, ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ಬಗ್ಗೆ ಮಾತನಾಡಿದ್ದಾರೆ. ಈ […]