ಐದಕ್ಕಿಂತ ಹೆಚ್ಚು ಮಕ್ಕಳನ್ನು ಹೆತ್ತರೆ ವಿಶೇಷ ಸೌಲಭ್ಯ: ಕೇರಳ ಕ್ಯಾಥೋಲಿಕ್ ಚರ್ಚ್ ಘೋಷಣೆ
ತಿರುವನಂತಪುರಂ: ಉತ್ತರ ಪ್ರದೇಶ ಸಹಿತ ವಿವಿಧ ರಾಜ್ಯಗಳಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ರೂಪಿಸಲು ಚಿಂತನೆ ನಡೆಸುತ್ತಿದ್ದರೆ, ಇದಕ್ಕೆ ತದ್ವಿರುದ್ಧ ಎಂಬಂತೆ ಕೇರಳದ ಕ್ಯಾಥೋಲಿಕ್ ಚರ್ಚ್ ಯೋಜನೆಯೊಂದನ್ನು ಘೋಷಣೆ ಮಾಡಿದೆ. ಕೇರಳ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕ್ರಿಶ್ಚಿಯನ್ ಸಮುದಾಯದ ಸಂಖ್ಯೆ ಕಡಿಮೆಯಾಗುತ್ತಿದ್ದು, ಸಮುದಾಯದಲ್ಲಿ ಜನನ ಪ್ರಮಾಣ ಶೇ.14ಕ್ಕಿಂತ ಕಡಿಮೆಯಾಗಿದೆ. ಆದ್ದರಿಂದ ಐದು ಅಥವಾ ಐದಕ್ಕಿಂತ ಹೆಚ್ಚು ಮಕ್ಕಳನ್ನು ಪಡೆದ ಕುಟುಂಬಕ್ಕೆ ಅಗತ್ಯವಿರುವ ವಿಶೇಷ ಸೌಲಭ್ಯಗಳನ್ನು ಏರ್ಪಡಿಸುವುದಾಗಿ ಕೇರಳದ ಕ್ಯಾಥೋಲಿಕ್ ಚರ್ಚ್ ಹೇಳಿಕೆ ನೀಡಿದೆ. ಸಿರೋ-ಮಲಬಾರ್ ಚರ್ಚ್ ಅಡಿಯಲ್ಲಿ ಬರುವ […]