ಕೇರಳ: ಮಾಜಿ ಕ್ರಿಕೆಟಿಗ ಆತ್ಮಹತ್ಯೆಗೆ ಶರಣು

ಅಲಪ್ಪುಳ: ಕೇರಳದ ಮಾಜಿ ಕ್ರಿಕೆಟಿಗ ಎಂ.ಸುರೇಶ್‌ ಕುಮಾರ್‌ (47) ಶುಕ್ರವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುರೇಶ್‌ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಇರುವುದನ್ನು ಮೊದಲು ನೋಡಿದ್ದು ಅವರ ಮಗ. ರಾತ್ರಿ 7.15ರ ಸುಮಾರಿಗೆ ಅವರು ನಮಗೆ ಈ ವಿಷಯವನ್ನು ತಿಳಿಸಿದರು. ಇದು ಆತ್ಮಹತ್ಯೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಕುರಿತು ತನಿಖೆ ನಡೆಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಎಡಗೈ ಸ್ಪಿನ್ನರ್‌ ಆಗಿದ್ದ ಸುರೇಶ್‌ ಅವರು ಭಾರತ ತಂಡದ ಪರ ಆಡಿದ್ದ ಕೇರಳದ ಮೊದಲ ಕ್ರಿಕೆಟಿಗ ಎಂಬ ಹಿರಿಮೆ […]