ಜೂನ್ 1ಕ್ಕೆ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶಿಸುವ ಸಾಧ್ಯತೆ: ಹವಾಮಾನ ಇಲಾಖೆ

ನವದೆಹಲಿ: ಕೇರಳದಲ್ಲಿ ಮೇಲ್ಮೈ ಸುಳಿಗಾಳಿ ಪ್ರಭಾವದಿಂದಾಗಿ ಜೂನ್‌ 1ರಿಂದ ನೈರುತ್ಯ ಮುಂಗಾರು ಪ್ರವೇಶಿಸುವ ಸಾಧ್ಯತೆಗಳು ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ. ಮೇ 31ರಿಂದ ಜೂನ್‌ 4ರವರೆಗೆ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಲಿದೆ. ಇದು ನೈರುತ್ಯ ಮುಂಗಾರು ಮಾರುತಗಳ ಪ್ರವೇಶಕ್ಕೆ ಅನುಕೂಲಕರ ವಾತಾವರಣ ಕಲ್ಪಿಸಲಿದೆ ಹಾಗೂ ಈ ವರ್ಷದಲ್ಲಿ ಮುಂಗಾರಿನಲ್ಲಿ ವಾಡಿಕೆ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.