ದಶಕಗಳ ಬಳಿಕ ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಲೈಮ್ ಡಿಸೀಸ್: ಬ್ಯಾಕ್ಟೀರಿಯಾದಿಂದ ಹರಡುವ ರೋಗದ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ
ತಿರುವನಂತಪುರ: ಬರೋಬ್ಬರಿ ಹತ್ತು ವರ್ಷದ ಬಳಿಕ ಕೇರಳ ರಾಜ್ಯದ ಎರ್ನಾಕುಳಂನಲ್ಲಿ ಲೈಮ್ ಡಿಸೀಸ್ (Lyme Disease) ಪತ್ತೆಯಾಗಿದೆ. ಅತ್ಯಂತ ಅಪರೂಪದ ಈ ಕಾಯಿಲೆ ಬೊರೆಲಿಯಾ ಬರ್ಗ್‌ಡೋರ್‍ಫೆರಿ ಎಂಬ ಬ್ಯಾಕ್ಟೀರಿಯಾ ಮೂಲಕ ಹರಡುತ್ತಿದ್ದು, ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ 56 ವರ್ಷದ ವ್ಯಕ್ತಿಯೊಬ್ಬರಲ್ಲಿ ಈ ರೋಗವನ್ನು ವೈದ್ಯರು ದೃಢಪಡಿಸಿದ್ದಾರೆ. ತೀವ್ರ ರೀತಿಯ ಜ್ವರ, ಮೊಣಕಾಲಿನ ಊತದಿಂದ ಡಿಸೆಂಬರ್ ತಿಂಗಳಿನಲ್ಲಿ ಈ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕದ ದಿನಗಳಲ್ಲಿ ಅವರಿಗೆ ಅಪಸ್ಮಾರದ ಲಕ್ಷಣ ಕಾಣಿಸಿಕೊಂಡಿತ್ತು. ಬಹಳಷ್ಟು ಚಿಕಿತ್ಸೆ ಬಳಿಕವೂ ಗುಣಮುಖವಾಗದ […]
ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಗೆ ರಾಜ್ಯದಿಂದ 15 ಲಕ್ಷ ರೂ ಪರಿಹಾರ: ಬಿಜೆಪಿ ಕಿಡಿ
ಬೆಂಗಳೂರು: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರ ಹಣದ ರೂಪವಾಗಿ 15 ಲಕ್ಷ ರೂಗಳನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಸಂಸದರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತೆರಿಗೆದಾರರ ಹಣವನ್ನು ಕಾಂಗ್ರೆಸ್ ದುರುಪಯೋಗಪಡಿಸಿಕೊಳ್ಳುತ್ತಿದೆ. ಅಲ್ಲದೇ ಕರ್ನಾಟಕದಲ್ಲಿ ಸೆರೆಹಿಡಿಯಲಾದ ಆನೆಯ ತುಳಿತಕ್ಕೊಳಗಾಗಿ ಕೇರಳದ ಅಜೀಶ್ ಮೃತಪಟ್ಟಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ‘ಬರಗಾಲದಿಂದ ರಾಜ್ಯದಾದ್ಯಂತ […]
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ದ ಎಸ್‌ಎಫ್‌ಐ ಪ್ರತಿಭಟನೆ: Z+ ಭದ್ರತೆ ಒದಗಿಸಲು ಕೇಂದ್ರ ನಿರ್ಧಾರ
ತಿರುವನಂತಪುರ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಅವರ ನಿವಾಸಕ್ಕೆ ಸಿಆರ್‌ಪಿಎಫ್ ಪಡೆಗಳ Z+ ಭದ್ರತೆ ಒದಗಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಕೇರಳ ರಾಜಭವನ ಶನಿವಾರ ಪ್ರಕಟಿಸಿದೆ. ಶನಿವಾರ ಮುಂಜಾನೆ ಕೊಲ್ಲಂ ಜಿಲ್ಲೆಯ ನಿಲಮೇಲ್‌ನಲ್ಲಿ ತಮ್ಮ ವಿರುದ್ಧ ಪ್ರತಿಭಟನೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿ ಗವರ್ನರ್ ಖಾನ್ ಅವರು ತಮ್ಮ ವಾಹನದಿಂದ ಇಳಿದು ಬೀದಿ ಬದಿಯ ಅಂಗಡಿಯ ಮುಂದೆ ಕುರ್ಚಿ ಹಾಕಿ ಕುಳಿತು ಧರಣಿ ನಡೆಸಿದ್ದಾರೆ. ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ […]
ಕೇರಳದ ‘ಕಲಾಮೇಳ್ತ್’ ಕಲಾ ಪ್ರಕಾರದಲ್ಲಿ ಮೂಡಿಬಂದ ‘ಭದ್ರಕಾಳಿ’
ಮಣಿಪಾಲ: ಕೇರಳದ ಕಲಾಪ್ರಕಾರವಾದ ‘ಕಲಾಮೇಳ್ತ್’ ಇದರ ಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸವನ್ನು ತ್ರಿಶೂರಿನ ಹಿರಿಯ ಕಲಾವಿದ ವೇಣುಗೋಪಾಲ್ ಇವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನಲ್ಲಿ ಶನಿವಾರ ಸಂಜೆ ನಡೆಸಿಕೊಟ್ಟರು. ಬಿಳಿ, ಹಸಿರು, ಕಪ್ಪು, ಹಳದಿ, ಕಡು ಕಂದು- ಈ ಐದು ನೈಸರ್ಗಿಕ ಬಣ್ಣಗಳನ್ನು ಬಳಸಿ, ‘ಭದ್ರಕಾಳಿ’ಯ ಚಿತ್ರವನ್ನು ಮೂಡಿಸುವುದರ ಮೂಲಕ ತಮ್ಮ ಪ್ರಾತ್ಯಕ್ಷಿಕೆಯನ್ನು ಪ್ರಸ್ತುತ ಪಡಿಸಿದರು. ಕೇರಳದ ದೇವಸ್ಥಾನಗಳಲ್ಲಿ ಪ್ರಚಲಿತವಾಗಿರುವ ಈ ಕಲೆಯ ಸಂದರ್ಭ ಹಾಗೂ ಒಟ್ಟು ಸ್ವರೂಪವನ್ನು ವಿವರಿಸಿದರು. ನಂತರ […]
ರಾಜ್ಯದ ಹೆಸರನ್ನು ‘ಕೇರಳಂ’ಗೆ ಬದಲಾಯಿಸುವ ನಿರ್ಣಯಕ್ಕೆ ಅಂಗೀಕಾರ ಹಾಕಿದ ಕೇರಳ ವಿಧಾನಸಭೆ; ಕೇಂದ್ರದ ಅಂಗೀಕಾರಕ್ಕೆ ಮನವಿ
ತಿರುವನಂತಪುರಂ: ರಾಜ್ಯದ ಹೆಸರನ್ನು ‘ಕೇರಳ’ ದಿಂದ ‘ಕೇರಳಂ’ ಎಂದು ಅಧಿಕೃತವಾಗಿ ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ರಾಜ್ಯ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿತು. ‘ಕೇರಳ ವನ್ನು ಕೇರಳಂ ಎಂದು ಬದಲಾಯಿಸಲು ಕೇರಳ ವಿಧಾನಸಭೆಯು ಸಂವಿಧಾನದಕ್ಕೆ ತಿದ್ದುಪಡಿಯನ್ನು ಮಾಡಲು ಕೋರಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ವಿಧಾನಸಭೆಯಲ್ಲಿ ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ ನಿಯಮ 118 ರ ಅಡಿಯಲ್ಲಿ ಸದನದಲ್ಲಿ ನಿರ್ಣಯದ ವಿಷಯಗಳನ್ನು ಮಂಡಿಸಿದರು. ಮಲಯಾಳಂನಲ್ಲಿ ‘ಕೇರಳಂ’ ಎಂಬುದು ಸ್ವೀಕಾರಾರ್ಹ ಮತ್ತು ಸಾಮಾನ್ಯ […]