ಕೊಚ್ಚಿ: ದೇಶದ ಪ್ರಪ್ರಥಮ ವಾಟರ್ ಮೆಟ್ರೋಗೆ ಚಾಲನೆ: ಪ್ರವಾಸೋದ್ಯಮಕ್ಕೆ ಉತ್ತೇಜನ

ಕೊಚ್ಚಿ: ಕೇರಳದ ಬಂದರು ನಗರವಾದ ಕೊಚ್ಚಿಯ ಸುತ್ತಲಿನ ಹತ್ತು ಸಣ್ಣ ದ್ವೀಪಗಳನ್ನು ಸಂಪರ್ಕಿಸುವ ದೇಶದ ಮೊದಲ ವಾಟರ್ ಮೆಟ್ರೋಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಲಿದ್ದಾರೆ. ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ತಯಾರಿಸಿದ ಎಂಟು ಎಲೆಕ್ಟ್ರಿಕ್ ಹೈಬ್ರಿಡ್ ಬೋಟ್‌ಗಳೊಂದಿಗೆ ಮೆಟ್ರೋ ಯೋಜನೆಯು ಪ್ರಾರಂಭವಾಗಲಿದೆ ಎಂದು ವಾಟರ್ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ರೈಲು, ರಸ್ತೆ ಮತ್ತು ನೀರನ್ನು ಸಂಪರ್ಕಿಸುವ ಇಂಟಿಗ್ರೇಟೆಡ್ ಮೆಟ್ರೋ ವ್ಯವಸ್ಥೆಯು ರಾಜ್ಯದ ಅಭಿವೃದ್ದಿಗೆ ವೇಗ ನೀಡಲಿದೆ. ರಸ್ತೆ ಸಾರಿಗೆ ವ್ಯವಸ್ಥೆಯ ಮೇಲಿನ ಒತ್ತಡಗಳನ್ನು ಕಡಿಮೆಗೊಳಿಸಲು ಜಲ […]

ಕೋಝಿಕ್ಕೋಡ್ ರೈಲಿನಲ್ಲಿ ಬೆಂಕಿ ಪ್ರಕರಣ: ಶಂಕಿತ ಆರೋಪಿಯ ಬಂಧನ

ಕೋಝಿಕ್ಕೋಡ್ : ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಶಂಕಿತ ಶಾರುಖ್ ಸೈಫಿ ಎಂಬಾತನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಸಹಯೋಗದಿಂದ ಕೇರಳ ಪೊಲೀಸರ ವಿಶೇಷ ತಂಡ ಮಹಾರಾಷ್ಟ್ರ ತಲುಪಿ ಮಂಗಳವಾರ ರಾತ್ರಿ ರತ್ನಗಿರಿಯಿಂದ ಬಂಧಿಸಿದೆ. ರೈಲಿಗೆ ಬೆಂಕಿ ಹಚ್ಚಿದ್ದ ಆರೋಪಿಗೂ ಸುಟ್ಟ ಗಾಯಗಳಾಗಿದ್ದು, ರತ್ನಗಿರಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಮಧ್ಯೆ ಕೇರಳದ ಎಟಿಎಸ್ […]

ರೈಲಿನಲ್ಲಿ ಸಹ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಪರಿಚಿತ ವ್ಯಕ್ತಿ: 3 ಸಾವು, ಹಲವರಿಗೆ ಗಾಯ

ಕೋಝಿಕ್ಕೋಡ್: ಭಾನುವಾರ ರಾತ್ರಿ 9.50 ರ ಸುಮಾರಿಗೆ ಕೋಝಿಕ್ಕೋಡ್ ರೈಲು ನಿಲ್ದಾಣದಿಂದ (ಉತ್ತರ ಕೇರಳ) ರೈಲು ಹೊರಟ ನಂತರ ಅಲಪುಝಾ-ಕಣ್ಣೂರು ಎಕ್ಸ್‌ಪ್ರೆಸ್‌ನ ಡಿ-1 ಕೋಚ್‌ನೊಳಗೆ ಇಬ್ಬರು ಪ್ರಯಾಣಿಕರ ನಡುವೆ ವಾಗ್ವಾದದ ನಂತರ ಘಟನೆ ಸಂಭವಿಸಿದೆ. ಅಪರಿಚಿತ ವ್ಯಕ್ತಿಯೊಬ್ಬ ಸಹ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರಿಗೆ ಸುಟ್ಟ ಗಾಯಗಳಾಗಿವೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಎಳತ್ತೂರು ಮತ್ತು ಕೊಯಿಲಾಂಡಿ ರೈಲು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ ಎನ್ನಲಾಗಿದೆ. ರೈಲು […]

ದೇವಸ್ಥಾನಕ್ಕೂ ಬಂತು ರೋಬೋಟ್ ತಂತ್ರಜ್ಞಾನ: ಕೇರಳದ ದೇವಸ್ಥಾನಕ್ಕೆ ಪೇಟಾ ಸಂಸ್ಥೆಯಿಂದ ಯಾಂತ್ರಿಕ ಆನೆ ಕೊಡುಗೆ

ತ್ರಿಶೂರು: ಇದೇ ಮೊದಲ ಬಾರಿಗೆ, ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜದಪ್ಪಿಲ್ಲಿ ಶ್ರೀ ಕೃಷ್ಣ ದೇವಾಲಯದಲ್ಲಿ ಧಾರ್ಮಿಕ ಆಚರಣೆಗಳನ್ನು ನಿರ್ವಹಿಸಲು ಜೀವ ಇರುವಂತೆ ಕಾಣುವ ಯಾಂತ್ರೀಕೃತ ಆನೆಯನ್ನು ಬಳಸಲಾಗಿದ್ದು, ಇದನ್ನು ನಟಿ ಪಾರ್ವತಿ ತಿರುವೋತ್ತು ಅವರ ಬೆಂಬಲದೊಂದಿಗೆ ಪೇಟಾ ಇಂಡಿಯಾ ಸಂಸ್ಥೆಯು ದೇವಸ್ಥಾನಕ್ಕೆ ಉಡುಗೊರೆಯಾಗಿ ನೀಡಿದೆ ಎಂದು ಇಂಡಿಯಾ ಟುಡೇ ವರದಿ ಹೇಳಿದೆ. ಇರಿಂಜದಪಿಲ್ಲಿ ರಾಮನ್ ಎಂಬ ಹೆಸರಿನ ಯಾಂತ್ರಿಕ ಆನೆಯು ಹತ್ತೂವರೆ ಅಡಿ ಎತ್ತರ ಮತ್ತು 800 ಕೆಜಿ ತೂಕವಿದೆ. ಸುಮಾರು 4 ಜನರನ್ನು ಸಾಗಿಸುವ ಸಾಮರ್ಥ್ಯ […]

ಕಾರಿನಲ್ಲಿ ಆಕಸ್ಮಿಕ ಬೆಂಕಿ: ಗರ್ಭಿಣಿ ಮಹಿಳೆ ಮತ್ತು ಪತಿ ಸಜೀವ ದಹನ

ಕುಟ್ಟಿಯತ್ತೂರು: ಕೇರಳದ ಕುಟ್ಟಿಯತ್ತೂರು ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಗುರುವಾರ ಸಂಭವಿಸಿದ ಭೀಕರ ದುರ್ಘಟನೆಯೊಂದರಲ್ಲಿ ಗರ್ಭಿಣಿ ಮಹಿಳೆ ಹಾಗೂ ಆಕೆಯ ಪತಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸಜೀವ ದಹನರಾದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲಿಯಾದವರನ್ನು ಜಿಲ್ಲೆಯ ಕುಟ್ಟಿಯತ್ತೂರು ಮೂಲದ ಪ್ರಿಜಿತ್ (35) ಮತ್ತು ಅವರ ಪತ್ನಿ ರೀಷಾ (26) ಎಂದು ಗುರುತಿಸಲಾಗಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ರೀಷಾಳು ಇನ್ನಿತರರೊಂದಿಗೆ ಕಾರಿನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣ […]