ಸರಕಾರ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸದಿದ್ದಲ್ಲಿ ತೀವ್ರ ಹೋರಾಟ: ರಮೇಶ್ ಕಾಂಚನ್

ಉಡುಪಿ: ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ಕಳೆದ ಹತ್ತು ತಿಂಗಳಿನಿಂದ ಸೀಮೆಎಣ್ಣೆ ಬಿಡುಗಡೆಗೊಂಡಿಲ್ಲ. ಈಗಾಗಲೇ ನಾಡದೋಣಿ ಸಂಘದವರು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿ ತಕ್ಷಣ ಸೀಮೆಎಣ್ಣೆ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ ಹೊರತಾಗಿಯೂ ಸರಕಾರ ನಿರ್ಲಕ್ಷ್ಯ ಧೋರಣೆ ಮುಂದುವರಿಸಿರುವುದು ಖಂಡನಾರ್ಹವಾಗಿದೆ. ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸರಕಾರವನ್ನು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರಕಾರವಿದ್ದ ಸಂದರ್ಭದಲ್ಲಿ ನಾಡದೋಣಿ ಮತ್ತು ಗಿಲ್‌ನೆಟ್ […]

ನಾಡದೋಣಿ ಮೀನುಗಾರರ ವಿವಿಧ ಬೇಡಿಕೆ ಈಡೇರಿಕೆಗಾಗಿ ಹಕ್ಕೊತ್ತಾಯ ಪಾದಯಾತ್ರೆ

ಉಡುಪಿ: ನಾಡದೋಣಿ ಮೀನುಗಾರರಿಗೆ ಸೀಮೆ ಎಣ್ಣೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 3ರಂದು ಬೈಂದೂರು ಹಾಗೂ ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದಿಂದ ಹಕ್ಕೊತ್ತಾಯ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬೈಂದೂರು ನಾಡದೋಣಿ ಸಂಘದ ಅಧ್ಯಕ್ಷ ಆನಂದ ಕಾರ್ವಿ ಉಪ್ಪುಂದ ತಿಳಿಸಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿಯ ಎಂಜಿಎಂ ಕಾಲೇಜಿನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಹಕ್ಕೊತ್ತಾಯ ಪಾದಯಾತ್ರೆ ನಡೆಸಲಿದ್ದು, ಸುಮಾರು ಐದು ಸಾವಿರಕ್ಕೂ ಹೆಚ್ಚು ಮೀನುಗಾರರು ಜಾಥಾದಲ್ಲಿ ಭಾಗವಹಿಸಲಿದ್ದಾರೆ ಎಂದರು. ರಾಜ್ಯ ಸರ್ಕಾರದ […]

ಕೇಂದ್ರದಿಂದ ನಾಡದೋಣಿ ಮೀನುಗಾರಿಕೆಗೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮಎಣ್ಣೆ ಬಿಡುಗಡೆ: ಯಶ್ ಪಾಲ್ ಸುವರ್ಣ ಅಭಿನಂದನೆ

ಉಡುಪಿ: ರಾಜ್ಯದ ಕರಾವಳಿ ಭಾಗದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಮೀನುಗಾರಿಕೆ ನಡೆಸಲು ಸಕಾಲದಲ್ಲಿ ಸೀಮೆ ಎಣ್ಣೆ ಹಂಚಿಕೆಯಾಗದೇ ಎದುರಿಸುತ್ತಿದ್ದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ 2022-23 ನೇ ಸಾಲಿನ 30 ಲಕ್ಷ ಲೀಟರ್ ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಜುಲೈ ತಿಂಗಳಿನಲ್ಲಿ ಕರ್ನಾಟಕ ಕರಾವಳಿ […]