ಇಲ್ಲಿ ಮಕ್ಕಳೇ ಮಾಡ್ತಾರೆ ಸಾವಯವ ಕೃಷಿ: ಈ ಅಂದ ಚಂದದ ಶಾಲೆ‌ ನೋಡೋದೇ ಖುಷಿ: ರಾಜ್ಯಕ್ಕೆ ಮಾದರಿಯಾದ ಸರಕಾರಿ ಶಾಲೆಯ ಕತೆ ಕೇಳಿ!

ಕಾರ್ಕಳ:ಇದೊಂದು ಅಪ್ಪಟ ಗ್ರಾಮೀಣ ಸೊಗಡಿನ ಶಾಲೆ.  ಇಲ್ಲಿನ ಪರಿಸರದ ಸೌಂದರ್ಯಕ್ಕೆ, ಶಾಲಾ ಆವರಣದ ಸ್ವಚ್ಛತೆಗೆ, ಶಾಲಾ ಹೊರಗೋಡೆಗಳ ವರ್ಲಿ ಚಿತ್ರಗಳಿಗೆ, ಶಾಲೆಯ ಮುಂದಿರುವ ಉದ್ಯಾನಕ್ಕೆ ಮಾರುಹೋಗದವರಿಲ್ಲ.ವಿದ್ಯಾರ್ಥಿಗಳ ಶಿಸ್ತು, ವಿಶಾಲವಾದ ಆಟದ ಮೈದಾನ, ವಿಸ್ತೃತವಾದ ಶಾಲಾ ಜಮೀನು, ಹೂಬಳ್ಳಿಗಳಿಂದ ಆವರಿಸಿರುವ ಹಚ್ಚಹಸುರಿನ ಓಪನ್‌ ಸ್ಟೇಜ್, ಗೋಡೆಗಳಲ್ಲಿ ಸುಂದರ ವಿನ್ಯಾಸವಿರುವ, ಕಲಿಕೆಗೆ ಪೂರಕವಾದ ಚಾರ್ಟ್‌ ಗಳಿಂದ ಕಂಗೊಳಿಸುವ ತರಗತಿ ಕೊಠಡಿಗಳು, ಗ್ರೀನ್‌ ಬೋರ್ಡ್‌ ಹಾಗೂ ಅದರ ಸುತ್ತಲಿನ ಬಣ್ಣದ ಚೌಕಟ್ಟು ಇತ್ಯಾದಿಗಳಿಂದ ಕಂಗೊಳಿಸುವ ಈ ಶಾಲೆಯೇ ಕಾರ್ಕಳ ತಾಲೂಕಿನ ಕೆರುವಾಶೆಯ […]