ಕ್ರಿಯೇಟಿವ್‌ ಪಿಯು ಕಾಲೇಜಿನಲ್ಲಿ ಕೆಸರ್ಡೊಂಜಿ ದಿನ ಕಾರ್ಯಕ್ರಮ

ಕಾರ್ಕಳ: ಕ್ರಿಯೇಟಿವ್‌ ಪ.ಪೂ. ಕಾಲೇಜಿನಲ್ಲಿ ಹಸಿರೊಡನೆ ಕಲಿಕೆಯ ಕಲರವ ಕಾರ್ಯಕ್ರಮ ಸೆ.19ರಂದು  ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ  ಹರಿಶ್ಚಂದ್ರ ಕುಲಾಲ್‌, ಇಂದು ನಾವು ವಿದ್ಯಾಭ್ಯಾಸದಲ್ಲಿ ಶೈಕ್ಷಣಿಕ ಪ್ರಗತಿಯನ್ನು ಮಾತ್ರ ಗಮನಿಸುತ್ತಿದ್ದೇವೆ ಆದರೆ ನಮಗೆ ಅನ್ನ ನೀಡುವ ಕೃಷಿ ಭೂಮಿ ಮತ್ತು ಕೃಷಿಕರ ಕುರಿತು ತಿಳುವಳಿಕೆ ಪಡೆಯಲು ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳು ಕೆಸರನ್ನು ಅಸಹ್ಯ ಎಂದು ಭಾವಿಸದೇ ಮಣ್ಣಿನ ಮಕ್ಕಳಾಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ […]