ಬಂಟಕಲ್ಲು ಕೆಸರುಗದ್ದೆ ಕ್ರೀಡೋತ್ಸವ ಉದ್ಘಾಟನೆ, ನಮ್ಮ ದೇಶದಲ್ಲಿ‌ ಕೃಷಿ ಸಂಸ್ಕೃತಿಯೇ ಪ್ರಧಾನ: ಗಣಪತಿ ನಾಯಕ್

ಉಡುಪಿ: ನಮ್ಮ ಪೂರ್ವಿಕರ ಶ್ರಮದಾಯಕ ಜೀವನದಲ್ಲಿ ಕೃಷಿ ಸಂಸ್ಕ್ರತಿಯೇ ಪ್ರಧಾನವಾಗಿದ್ದು, ಈ ತಳಹದಿಯಲ್ಲಿ ಧಾರ್ಮಿಕ ವೈದಿಕ ಪರಂಪರೆ ಬೆಳೆದು ಬಂದಿದೆ. ಅವಿಭಕ್ತ ಕುಟುಂಬದಲ್ಲಿ ಮಕ್ಕಳಿಗೆ ನೋಡಿಕಲಿಯುವ ಅವಕಾಶವಿತ್ತು. ಈಗಿನ ಮಕ್ಕಳಿಗೆ ಈ ಅವಕಾಶವಿಲ್ಲ. ನವಪೀಳಿಗೆಯಲ್ಲಿ ಕೃಷಿ ಪರಂಪರೆಯನ್ನು ಪರಿಚಯಿಸುವಲ್ಲಿ ಕೆಸರುಗದ್ದೆ ಕ್ರೀಡೋತ್ಸವಗಳು ಪ್ರೇರಕ ಎಂದು ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದ ಆಡಲಿತ ಮೊಕ್ತೇಸರ ಗುರ್ನೆಬೆಟ್ಟು ಗಣಪತಿ ನಾಯಕ್ ಹೇಳಿದರು. ಅವರು ಭಾನುವಾರ ಬಂಟಕಲ್ಲು ರಾಜಾಪುರ ಸಾರಸ್ವತ ಯುವವೃಂದ, ಶ್ರೀದುರ್ಗಾ ಮಹಿಳಾ ವೃಂದದ ಜಂಟಿ ಆಶ್ರಯದಲ್ಲಿ ಸಡಂಬೈಲು ಅನಂತರಾಮ […]