ಯಕ್ಷಗಾನ ತಾಳಮದ್ದಳೆಯ ಹಿರಿಯ ಅರ್ಥಧಾರಿ ಬರೆ ಕೇಶವ ಭಟ್ಟ ನಿಧನ.

ಉಡುಪಿ: ಯಕ್ಷಗಾನ ತಾಳಮದ್ದಳೆಯ ಹಿರಿಯ ಅರ್ಥಧಾರಿ ಬರೆ ಕೇಶವ ಭಟ್ಟ (84) ಶನಿವಾರ (25. 1. 25) ನಿಧನ ಹೊಂದಿದರು. ವೃತ್ತಿಯಲ್ಲಿ ಅಧ್ಯಾಪಕರಾಗಿದ್ದ ಕೇಶವ ಭಟ್ಟರು ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ಕಲಾ ಸಂಯೋಜಕರಾಗಿ, ಕಲಾವಿಮರ್ಶಕರಾಗಿ, ಲೇಖಕರಾಗಿ ಸಾಹಿತ್ಯ ಮತ್ತು ಕಲಾ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿದ್ದರು. ನಿವೃತ್ತಿಯ ಅನಂತರ ವಾಸುದೇವ ಸಾಮಗರ ಸಂಯಮಂ ತಂಡದಲ್ಲಿ ಕೆಲವು ವರ್ಷ ತಿರುಗಾಟ ಮಾಡಿದ್ದರು. ಅಪಾರ ಪುರಾಣ ಜ್ಞಾನ, ಭಾವಪೂರ್ಣ ಅರ್ಥಗಾರಿಕೆಯಿಂದ ಕಲಾಭಿಮಾನಿಗಳ ಗೌರವಕ್ಕೆ ಪಾತ್ರರಾಗಿದ್ದರು. ಸಂಸ್ಥೆಯ ತಾಳಮದ್ದಲೆ ಸಪ್ತಾಹದಲ್ಲಿ ಅರ್ಥಧಾರಿಯಾಗಿ, […]