ಎಂಟು ಮಂಗಗಳಲ್ಲಿ ಕೆಎಫ್ಡಿ ವೈರಸ್ ಪತ್ತೆ, ಆತಂಕ ಬೇಡ: ಜಿಲ್ಲಾಧಿಕಾರಿ

ಜಿಲ್ಲೆಯ ಮೂರು ತಾಲೂಕುಗಳಲ್ಲಿ ಕಳೆದ ಸುಮಾರು ಹತ್ತು ದಿನಗಳಿಂದ ಮೃತಪಟ್ಟ 25ಕ್ಕೂ ಅಧಿಕ ಮಂಗಗಳಲ್ಲಿ 12 ಮಂಗಗಳ ಪರೀಕ್ಷಾ ವರದಿ ಪುಣೆಯಿಂದ ಬಂದಿದ್ದು, ಇವುಗಳಲ್ಲಿ ಎಂಟು ಮಂಗಗಳಲ್ಲಿ ಕ್ಯಾಸನೂರು ಫಾರೆಸ್ಟ್ ಡೀಸಿಸ್ (ಕೆಎಫ್ಡಿ-ಮಂಗನ ಕಾಯಿಲೆ)ನ ವೈರಸ್ ಪತ್ತೆಯಾಗಿದೆ ಎಂದು ಮಂಗನ ಕಾಯಿಲೆಯ ಉಡುಪಿ ಜಿಲ್ಲಾ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ. ಕುಂದಾಪುರ ತಾಲೂಕಿನ ಶಿರೂರು, ಸಿದ್ಧಾಪುರ, ಹೊಸಂಗಡಿ, ಬೆಳ್ವೆ (2), ಕಂಡ್ಲೂರು, ಉಡುಪಿ ತಾಲೂಕಿನ ಬ್ರಹ್ಮಾವರ ಸಮೀಪದ ಹೇರೂರು ಹಾಗೂ ಕಾರ್ಕಳ ತಾಲೂಕಿನ ಹಿರ್ಗಾನ ಪ್ರಾಥಮಿಕ […]