ಮಂಗನ ಕಾಯಿಲೆ: ಐದು ವರ್ಷದ ಬಾಲಕಿ ಸಾವು; ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ

ಉಡುಪಿ: ಕ್ಯಾಸನೂರು ಅರಣ್ಯ ರೋಗ (ಕೆಎಫ್‌ಡಿ) ಅಥವಾ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಸಂಜೆ ಬಾಲಕಿ ಸಾವಿನೊಂದಿಗೆ ವೈರಸ್ ಸೋಂಕಿತರ ಸಂಖ್ಯೆ ಒಂಬತ್ತಕ್ಕೆ ಏರಿದೆ, ಸಿದ್ದಾಪುರ ತಾಲೂಕಿನಲ್ಲಿ ಎಂಟು ಸಾವುಗಳು ದಾಖಲಾಗಿವೆ ಎಂದು ಉತ್ತರ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ.ನೀರಜ್ ಬಿ.ವಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 99 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಿದ್ದಾಪುರ […]

ಮಂಗನಕಾಯಿಲೆ: ಉಡುಪಿಯಲ್ಲಿ ಒಂದು ಪ್ರಕರಣ ಪತ್ತೆ

ಉಡುಪಿ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗಳೂರು 4, ಉಡುಪಿಯಲ್ಲಿ 1 ಪಾಸಿಟಿವ್‌ ಪ್ರಕರಣ ಕಂಡು ಬಂದಿದೆ. ಉಡುಪಿಯಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಈವರೆಗೆ 117 ಮಂದಿಗೆ ಪಾಸಿಟಿವ್‌ ಬಂದಿದ್ದು, 82 ಮಂದಿ ಗುಣಮುಖರಾಗಿ ಮೂವರು ಮೃತ ಪಟ್ಟಿದ್ದಾರೆ. 19 ಸಕ್ರಿಯ ಪ್ರಕರಣಗಳಿವೆ. ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಹೇಗೆ […]