ಕಾಂಗ್ರೆಸ್ ತೊರೆದ ನಟಿ ಖುಷ್ಬೂ: ಬಿಜೆಪಿ ಸೇರ್ಪಡೆ ಸಾಧ್ಯತೆ

ನವದೆಹಲಿ: ಕಾಂಗ್ರೆಸ್ ವಕ್ತಾರೆ ಆಗಿದ್ದ ನಟಿ ಖುಷ್ಬೂ ಸುಂದರ್‌ ಕಾಂಗ್ರೆಸ್‌ನ ಎಲ್ಲ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಎಐಸಿಸಿ ವಕ್ತಾರ ಸ್ಥಾನದಿಂದ ಕೈಬಿಡಲಾಗಿದೆ. ಆದೇಶವು ತಕ್ಷಣದಿಂದಲೇ ಅನ್ವಯವಾಗಲಿದೆ ಎಂದು ಕಾಂಗ್ರೆಸ್‌ ಹೇಳಿದೆ. ಖುಷ್ಬೂ ಸೋಮವಾರ ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಇದರಿಂದ ಕಾಂಗ್ರೆಸ್‌ ತೊರೆದಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಸಂಜೆ ಖುಷ್ಬೂ ತಮಿಳುನಾಡಿನಿಂದ ದೆಹಲಿ ತಲುಪಿದ್ದಾರೆ. 2010ರಲ್ಲಿ ಖುಷ್ಬೂ ಡಿಎಂಕೆ ಸೇರ್ಪಡೆಯಾಗಿದ್ದರು. ಆಗ ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರದಲ್ಲಿತ್ತು. ಬಳಿಕ 2014ರಲ್ಲಿ ಡಿಎಂಕೆ ತೊರೆದ ಕಾಂಗ್ರೆಸ್‌ಗೆ ಸೇರ್ಪಡೆಯಾದರು. 2019ರ […]