ಖಾತೆಗಳ ಮರುಹಂಚಿಕೆ: ಅರ್ಜುನ್ ರಾಮ್ ಮೇಘವಾಲ್ ಗೆ ಕಾನೂನು; ಕಿರಣ್ ರಿಜಿಜುಗೆ ಭೂ ವಿಜ್ಞಾನ ಖಾತೆ
ನವದೆಹಲಿ: ಕಿರಣ್ ರಿಜಿಜು ಅವರನ್ನು ಗುರುವಾರ ಕೇಂದ್ರ ಕಾನೂನು ಸಚಿವ ಸ್ಥಾನದಿಂದ ತೆರವುಗೊಳಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಹೇಳಿಕೆ ತಿಳಿಸಿದೆ. ಅವರ ಸ್ಥಾನಕ್ಕೆ ಅರ್ಜುನ್ ರಾಮ್ ಮೇಘವಾಲ್ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಿಗೆ ಖಾತೆಗಳನ್ನು ಮರುಹಂಚಿಕೆ ಮಾಡಿದ್ದಾರೆ. “ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ಕಿರಣ್ ರಿಜಿಜು ಅವರಿಗೆ ನಿಯೋಜಿಸಲಾಗಿದೆ” ಎಂದು ಹೇಳಿಕೆ ತಿಳಿಸಿದೆ. ರಿಜಿಜು ಜುಲೈ 8, 2021 ರಂದು ಕಾನೂನು ಮತ್ತು […]